ಚೆನ್ನೈ:
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಳೆದ ನಾಲ್ಕು ದಿನಗಳಿಂದ ಕುಮಾರಸ್ವಾಮಿ ಆರೋಗ್ಯದಲ್ಲಿ ಕೊಂಚ ಏರುಪೇರು ಆಗಿದೆ. ಹೀಗಾಗಿ ಚೆನ್ನೈಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಈ ಹಿಂದೆಯೂ ಅವರು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದರು.
