ಕುಣಿಗಲ್ : ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ

 ಕುಣಿಗಲ್ :

      ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನ್ಯಾಯಯುತವಾಗಿ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ತಹಸಿಲ್ದಾರ್ ಹಾಗೂ ಚುನಾವಣಾಧಿಕಾರಿ ವಿಶ್ವನಾಥ್ ತಿಳಿಸಿದರು.

      ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ 36 ಗ್ರಾಮಪಂಚಾಯತಿಯ ಮೊದಲನೇ ಹಂತದ ಚುನಾವಣೆಗೆ ಸಕಲ ಸಿದ್ಧತೆ ಕೈಗೊಂಡು ಮುಕ್ತ ನ್ಯಾಯಯುತವಾದ ಚುನಾವಣೆ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಡಿಸೆಂಬರ್ 22ರಂದು ಬೆಳಿಗ್ಗೆ 7 ರಿಂದ ಸಂಜೆ 5 ವರೆಗೆ ಮತದಾನ ನಡೆಯಲಿದ್ದು ದಿನಾಂಕ 7ರಿಂದ 11ರವರೆಗೆ ಆಯಾ ಗ್ರಾಮ ಪಂಚಾಯಿತಿಯಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಿದ್ದು 12ರಂದು ಪರಿಶೀಲನೆ ನಡೆಸಲಾಗುವುದು 14ರಂದು ನಾಮಪತ್ರಗಳ ವಾಪಸ್ ಪಡೆಯಬಹುದಾಗಿದ್ದು, ದಿನಾಂಕ 22 ರಂದು ಮತದಾನ ನಡೆಯಲಿದೆ ಎಂದರು.

      ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಚಲಾವಣೆಯಲ್ಲಿದ್ದು ಯಾವುದೇ ಅಹಿತಕರ ಘಟನೆ ನಡೆದರೆ 24ರಂದು ಮರುಮತದಾನಕ್ಕೆ ಆ ಭಾಗದಲ್ಲಿ ವ್ಯವಸ್ಥೆ ಕಲ್ಪಿಸಿದ್ದು ಡಿಸೆಂಬರ್ 30ರಂದು ಕುಣಿಗಲ್ ಮಹಾತ್ಮಗಾಂಧಿ ಪದವಿಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಪ್ರತಿ ಗ್ರಾಮ ಪಂಚಾಯಿತಿಗೆ ಚುನಾವಣೆಗೆ ಆರ್‍ಓ ಹಾಗೂ ಎಅರ್‍ಓಗಳನ್ನು ನೇಮಕ ಮಾಡಲಾಗಿದೆ. ತಾಲ್ಲೂಕಿನ 36 ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಒಟ್ಟು 165883 ಮತದಾರರಲ್ಲಿ 84121 ಪುರುಷ 81754 ಮಹಿಳೆಯರು ಸೇರಿದಂತೆ ಇದರಲ್ಲಿ 235 ಕ್ಷೇತ್ರಗಳಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಒಟ್ಟು 496 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

      ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಪಿಡಿಒ ಗಳು ಆಯಾ ಗ್ರಾಮ ಪಂಚಾಯಿತಿಯ ಉಸ್ತುವಾರಿ ಮಾರ್ಗಸೂಚಿಗಳನ್ನು ನೋಡಿಕೊಳ್ಳುತ್ತಾರೆ ಕಾನೂನು ಸುವ್ಯವಸ್ಥೆಯನ್ನು ವೃತ್ತ ಪೊಲೀಸ್ ಇನ್ಸ್ಪೆಕ್ಟರ್ ಸಬ್‍ಇನ್ಸ್ಪೆಕ್ಟರ್ ಅಧಿಕಾರಿಗಳಾಗಿ ಇರುತ್ತಾರೆ. ತಾಲೂಕಿನಲ್ಲಿ ಅತಿಸೂಕ್ಷ್ಮ 90 ಮತಗಟ್ಟೆಗಳಿಗೆ ಇವುಗಳಲ್ಲಿ ಸೂಕ್ಷ್ಮ ಮತಗಟ್ಟೆಗಳು 108 ಸಾಮಾನ್ಯ 60 ಮತಗಟ್ಟೆಗಳು ಸ್ಥಾಪಿಸಲಾಗಿದೆ ಎಂದರು.

      ಡಿವೈಎಸ್ಪಿ ಜಗದೀಶ್ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿಯಾದ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪೊಲೀಸ್ ವೃತ್ತ ನಿರೀಕ್ಷಕ ಗುರುಪ್ರಸಾದ್ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap