ಕುಣಿಗಲ್ :
ರೌಡಿಯೋರ್ವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿರುವ ಘಟನೆಯು ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಕಿಲಾರ ಗ್ರಾಮದಲ್ಲಿ ಜರುಗಿದೆ.
ಮೃತ ವ್ಯಕ್ತಿಯನ್ನು ವಿನಯ್ (40) ಎಂದು ಗುರುತಿಸಲಾಗಿದ್ದು,ಸದರಿ ವ್ಯಕ್ತಿ 5 ವರ್ಷಗಳ ಹಿಂದೆ ತನ್ನ ತಂದೆ ಗಂಗಾಧರ ಹಾಗೂ ಮಕ್ಕಳನ್ನು ಕೊಲೆ ಮಾಡಿ ಜೈಲು ವಾಸ ಅನುಭವಿಸುತ್ತಿದ್ದನು. ಈತ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿ ತುಮಕೂರಿನಲ್ಲಿ ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದು ಬಂದಿದೆ.
ಈತನಿಗೆ ಮಂಗಳವಾರ ರಾತ್ರಿ ಕಂಠಪೂರ್ತಿ ಕುಡಿಸಿ ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಈತನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಡಿವೈಎಸ್ಪಿ ಜಗದೀಶ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ