ಕಾರು ಅಪಘಾತದಲ್ಲಿ ಕುರುಬೂರು ಶಾಂತಕುಮಾರ್ ಗೆ ಗಂಭೀರ ಗಾಯ

ಬೆಂಗಳೂರು:

   ಪಂಜಾಬ್​ನ ಪಟಿಯಾಲ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

   ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ನಿನ್ನೆ ಪಂಜಾಬ್​​ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ಮಿಳುನಾಡಿನ ಪಾಂಡಿಯನ್ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

  ಈಗ ಕುರುಬೂರ್ ಶಾಂತಕುಮಾರ್ ಅವರನ್ನು ಪಟಿಯಾಲ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್​ ಲಿಫ್ಟ್​ ಮಾಡಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯವಸ್ಥೆ ಮಾಡಿದ್ದಾರೆ. ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನುಮೂಳೆಗೆ ತೀವ್ರ ಗಾಯಾವಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಅವರನ್ನು ಏರ್​ ಲಿಫ್ಟ್ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದು, ಈ ಸಂಬಂಧ ಸೋಮಣ್ಣ ಅವರು ಈಗಾಗಲೇ ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.

   ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಕನೋಲಿ ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಂತಕುಮಾರ್ ಅವರು ಶುಕ್ರವಾರ ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯ ಈ ದುರ್ಘಟನೆ ಸಂಭವಿಸಿತ್ತು.

 

Recent Articles

spot_img

Related Stories

Share via
Copy link