ವೈರಲ್‌ ಆಯ್ತು ಮಹಿಳಾ ಬ್ಲಾಗರ್‌ ಪ್ರಪೊಸ್‌ ವೀಡಿಯೋ..!

ಡೆಹ್ರಾಡೂನ್:

     ಇತ್ತೀಚೆಗೆ ಮಹಿಳಾ ಬ್ಲಾಗರ್ ಒಬ್ಬರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ (ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ ) ಮಾಡಿದ ವಿಡಿಯೋ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಇಲ್ಲಿನ ಕೇದಾರನಾಥ ದೇಗುಲದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯುವುದು ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ.

      ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯು ದೇವಾಲಯದ ಆವರಣದಲ್ಲಿ ವಿವಿಧೆಡೆ ಬೋರ್ಡ್‌ಗಳನ್ನು ಹಾಕಿದ್ದು, ‘ಮೊಬೈಲ್ ಫೋನ್‌ಗಳೊಂದಿಗೆ ದೇವಾಲಯದ ಆವರಣವನ್ನು ಪ್ರವೇಶಿಸಬೇಡಿ ದೇವಾಲಯದ ಒಳಗೆ ಯಾವುದೇ ರೀತಿಯ ಛಾಯಾಗ್ರಹಣ ಮತ್ತು ವೀಡಿಯೋಗ್ರಫಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ನೀವು ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿರುತ್ತೀರಿ’ ಎಂದು ಬರೆಯಲಾಗಿದೆ.

    ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್ ಮಾತನಾಡಿ, ಧಾರ್ಮಿಕ ಸ್ಥಳವು ನಂಬಿಕೆಯ ವ್ಯವಸ್ಥೆಯನ್ನು ಅನುಸರಿಸುತ್ತದೆ ಮತ್ತು ಭಕ್ತರು ಅದನ್ನು ಗೌರವಿಸಬೇಕು ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap