ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗ್ರಾಮವೊಂದರಲ್ಲಿ 21 ವರ್ಷದ ಯುವತಿಯೊಬ್ಬರು ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಪ್ರತೀಕ್ಷಾ ಶೆಟ್ಟಿ ಎಂದು ಗುರುತಿಸಲಾಗಿದ್ದು, ಗುರುವಾರ ಸಂಜೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಮಹಿಳೆ ಪಾರ್ಸೆಲ್ ತೆಗೆದುಕೊಳ್ಳಲು ಮನೆಯಿಂದ ಹೊರಗೆ ಬಂದಿದ್ದ ವೇಳೆ ರಸ್ತೆಯಲ್ಲಿ ವಿದ್ಯುತ್ ತಂತಿ ತಗುಲಿದೆ.ಆಕೆಯೊಂದಿಗಿದ್ದ ಪ್ರತೀಕ್ಷಾಳ ತಂದೆ ಮಗಳನ್ನು ರಕ್ಷಿಸಲು ಯತ್ನಿಸಿದ್ದು, ಅವರಿಗೂ ಗಾಯಗಳಾಗಿವೆ.
ಮೃತ ಯುವತಿ ಶಿಬಾಜೆ ಗ್ರಾಮದ ಬರ್ಗುಳಾ ನಿವಾಸಿಯಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.