ಮಡಿಕೇರಿ:
ಕೊಡಗು ಜಿಲ್ಲೆಯ ಹಲವೆಡೆ ಬುಧವಾರ 1.6 ತೀವ್ರತೆಯ ಲಘು ಭೂಕಂಪದ ಅನುಭವವಾಗಿದೆ. ಮದೆನಾಡು ಗ್ರಾಮ ಪಂಚಾಯಿತಿಯ ವಾಯವ್ಯ ದಿಕ್ಕಿನಲ್ಲಿ 2.4 ಕಿಮೀ ದೂರದ 5 ಕಿಮೀ ಆಳವನ್ನು ಭೂಕಂಪದ ಕೇಂದ್ರ ಬಿಂದು ಎಂದು ಗುರುತಿಸಲಾಗಿದೆ. ರಿಕ್ಟರ್ ಮಾಪಕದಲ್ಲಿ ಸುಮಾರು 1.6 ರಷ್ಟು ಪ್ರಮಾಣದಲ್ಲಿ ಭೂಕಂಪನ ದಾಖಲಾಗಿದೆ. ನಿನ್ನೆ ಬೆಳಗ್ಗೆ 10.49ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.
ಮದೆನಾಡು ಸುತ್ತಮುತ್ತಲಿನ 15 ರಿಂದ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ಅನುಭವಾಗಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಯಾವುದೇ ಹಾನಿಯಾಗಿಲ್ಲ KSNDMC ಎಂದು ಮಾಹಿತಿ ನೀಡಿದೆ. ಕೊಡಗಿನಲ್ಲಿ 2018 ಹಾಗೂ ಕಳೆದ ವರ್ಷವೂ ಸಹ ಭೂಕಂಪನದ ಅನುಭವಾಗಿತ್ತು.