ಜಗದೀಶ್​ ಶೆಟ್ಟರ್​ ಬಾಲ ಮತ್ತೆ ಚಿಗುರುತ್ತಿದೆ : ಲಕ್ಷ್ಮಣ ಸವದಿ

ಬೆಳಗಾವಿ :

    ಜಗದೀಶ್​​ ಶೆಟ್ಟರ್‌ಗೆ  ಮೊದಲು ಬಾಲ ಕಟ್ ಮಾಡಿದರು. ಈಗೀಗ ಜಗದೀಶ್​ ಶೆಟ್ಟರ್​ ಬಾಲ ಮತ್ತೆ ಚಿಗುರುತ್ತಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

    ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಎಸ್​​ ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ದೆ.

    ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದಿದ್ದರು. ಬಿಎಸ್​ ಯಡಿಯೂರಪ್ಪ ಮತ್ತು ಈಶ್ವರಪ್ಪ ರಾಜ್ಯದಲ್ಲಿ ಬಿಜೆಪಿ ಬಲಪಡಿಸಿದರು. ಆದರೆ, K.S.ಈಶ್ವರಪ್ಪ ಮಗನಿಗೆ ಟಿಕೆಟ್ ನೀಡಲಿಲ್ಲ.ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

    ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಚುನಾವಣೆಯ ತಂತ್ರ ಪ್ರತಿತಂತ್ರಗಳನ್ನು ರೂಪಿಸಬೇಕು. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು. ಪ್ರತಿಯೊಂದು ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕೆಲಸಗಳನ್ನು ಜನರಿಗೆ ತಲುಪಿಸಬೇಕು. ಸಿಎಂ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ. ಪಂಚ ಗ್ಯಾರಂಟಿಗಳಿಗೆ 55 ಸಾವಿರ ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ