ಅಥಣಿ:
ಸಿಎಂ ಬದಲಾವಣೆ ಎಂಬುದು ಹಗಲು ಕನಸು ಕಾಣುತ್ತಿದ್ದಾರೆ ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಇಲ್ಲವೆಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದರು.
ಅವರು ಸೋಮವಾರ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಮಾದ್ಯಮಗಳ ಜೊತೆ ಮಾತನಾಡುತ್ತಾ, ರಾಜ್ಯದಲ್ಲಿ ಸಿಎಂ ಬದಲಾವಣೆ ಎಂಬುದು ಊಹಾಪೋಹಗಳು ಅಷ್ಟೇ, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಎಂಬುದು ಇಲ್ಲವೇ ಇಲ್ಲ ಯಾವುದೇ ಕಾರಣಕ್ಕೂ ಬದಲಾವಣೆ ಪ್ರಶ್ನೆ ಇಲ್ಲವೆಂದು ಸವದಿ ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ಬದಲಾವಣೆ ಎಂಬುದು ಮಾಧ್ಯಮದಲ್ಲಿ ಊಹಾಪೋಹಗಳು ಅಷ್ಟೇ, ವಿರೋಧ ಪಕ್ಷಗಳಿಗೆ ಕೆಲಸವಿಲ್ಲ ಅದಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ, ರಾಜ್ಯ ಕಂಡ ಒಳ್ಳೆಯ ಸಿಎಂ ಗೆ ಕಪ್ಪು ಚುಕ್ಕೆ ಹಚ್ಚುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ
ಕಪ್ಪು ಚುಕ್ಕೆ ಹಚ್ಚುವುದಕ್ಕೆ ಪ್ರಯತ್ನ ಪಟ್ಟರು ಅವರಿಗೆ ಸಾಧ್ಯವಾಗಲ್ಲ ಎಂದು ಶಾಸಕ ಲಕ್ಷ್ಮಣ್ ಸವದಿ ಸಿಎಂ ಪರವಾಗಿ ಬ್ಯಾಟಿಂಗ್ ಬೀಸಿದರು.