ಕೇಂದ್ರ ಬಜೆಟ್‌ ಬಹಾರ ಚುನಾವಣೆ ಪ್ರಣಾಳಿಕೆಯಾಗಿದೆ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ:

    ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌  ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.ಬಿಹಾರ ಜನರ ಓಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.

   ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.

Recent Articles

spot_img

Related Stories

Share via
Copy link