ಇಂದು 11ಕ್ಕೆ ಕೇಂದ್ರದ 2ನೇ ಅವಧಿಯ ಕೊನೆಯ ಬಜೆಟ್….!

ನವದೆಹಲಿ:

     ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಗೆ ಹೋಗುವುದಕ್ಕೂ ಮುಂಚಿನ ಕೊನೆಯ ಆಯವ್ಯಯವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಇದು ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಆಗಲಿದೆ.

      ಚುನಾವಣೆಗೂ ಮುನ್ನ ಮಂಡಿಸಲಿರುವ ಬಜೆಟ್ ಆಗಿರುವುದರಿಂದ ಇದು ಪೂರ್ಣ ಪ್ರಮಾಣದ ಬಜೆಟ್ ಆಗಿರದೆ ಮಧ್ಯಂತರ ಬಜೆಟ್ ಆಗಿರಲಿದೆ. ಅದರಲ್ಲಿ ಮತದಾರರಿಗೆ ಭರ್ಜರಿ ಕೊಡುಗೆಗಳು ಇರಲಿವೆಯೇ ಅಥವಾ ದೇಶದ ಆರ್ಥಿಕಾಭಿವೃದ್ಧಿ ಮಾತ್ರ ಗಮನದಲ್ಲಿರಿಸಿಕೊಳ್ಳಲಾಗುತ್ತದೆಯೇ ಎಂಬ ಕುತೂಹಲಗಳು ಮೂಡಿವೆ.

     ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುವ ಮೂಲಕ ಸಂಸತ್ತಿನ ಬಜೆಟ್ ಅಧಿವೇಶನ ನಿನ್ನೆ ಪ್ರಾರಂಭವಾಯಿತು.ರಾಷ್ಟ್ರಪತಿ ಭಾಷಣದಲ್ಲಿ, 2023 ದೇಶಕ್ಕೆ ಐತಿಹಾಸಿಕ ವರ್ಷವಾಗಿದೆ. ದೇಶವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯ ವೇಗವನ್ನು ಮುಂದುವರೆಸಿದೆ ಎಂದು ಹೇಳಿದ್ದರು.

     ಈ ಏಪ್ರಿಲ್‌ನಲ್ಲಿ ಪ್ರಾರಂಭವಾಗುವ 2024-25 ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ.7 ರ ಸಮೀಪಕ್ಕೆ ಬರುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವಾಲಯವು ಪರಿಶೀಲನಾ ವರದಿಯಲ್ಲಿ ತಿಳಿಸಿದೆ.

     ಭಾರತದ ಆರ್ಥಿಕತೆಯು 2022-23ರಲ್ಲಿ ಶೇ.7.2 ಮತ್ತು 2021-22ರಲ್ಲಿ ಶೇ.8.7ರಷ್ಟು ಬೆಳವಣಿಗೆ ಕಂಡಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 2023-24 ರಲ್ಲಿ ಭಾರತದ ಆರ್ಥಿಕತೆಯು ಶೇ.7.3 ಬೆಳವಣಿಗೆ ನಿರೀಕ್ಷಿಸಲಾಗಿದೆ. ಇದು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap