ಶ್ರೀಘ್ರದಲ್ಲಿ ತೆರೆಗೆ “LEADER ರಾಮಯ್ಯ”

ಬೆಂಗಳೂರು

     ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗು ವಿಪಕ್ಷ ನಾಯಕ ಸಿದ್ದರಾಮಯ್ಯನವರ ಜೀವನಾಧಾರಿತ ಸಿನಿಮಾ ತೆರೆಗೆ ಬರಲಿದೆ .

     ಯಾವಾಗಲು ಜನಪರ ಕೆಲಸ ಜನರ ಮೇಲಿನ ಅವರ ಪ್ರೀತಿಗೆ ಹೆಸರುವಾಸಿಯಾಗಿರುವ ಶ್ರೀ ಸಿದ್ದರಾಮಯ್ಯ ಅವರು ತಮ್ಮ ಜೀವನವನ್ನು ಆಧರಿಸಿದ ಸಿನಿಮಾದ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿದ್ದಾರೆ  ರಾಮನವಮಿಯ ಶುಭ ದಿನದಂದು ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು . ಸಿನಿಮಾ ಆಗಸ್ಟ್‌ ವೇಳೆಗೆ ಬಿಡುಗಡೆಯಾಗಲಿದೆ ಎಂದು ಸಿನಿಮಾ ತಂಡ ತಿಳಿಸಿದೆ .

     ಬೆಂಗಳೂರಿನ ಸಿದ್ದರಾಮಯ್ಯ ನಿವಾಸದಲ್ಲಿ ‘Leader ರಾಮಯ್ಯ’ ಎಂಬ ಶೀರ್ಷಿಕೆಯ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸತ್ಯರತ್ನಂ ನಿರ್ದೇಶನದಲ್ಲಿ ಸಿದ್ದರಾಮಯ್ಯ ಜೀವನ ಆಧಾರಿತ ಸಿನಿಮಾ ತೆರೆಗೆ ಬರಲಿದೆ. ಕನ್ನಡ, ತಮಿಳು, ತೆಲಗು, ಹಿಂದಿ ಮತ್ತು ಮಲೆಯಾಳಂ ಭಾಷೆಯಲ್ಲಿ ‘Leader ರಾಮಯ್ಯ’ ಎಂಬ ಶೀರ್ಷಿಕೆಯ ಸಿನಿಮಾ ತೆರೆಗೆ ಬರಲಿದೆ. ಸದ್ಯದ ಮಾಹಿತಿ ಪ್ರಕಾರ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಸಿದ್ದರಾಮಯ್ಯ ಪಾತ್ರದಲ್ಲಿ ನಟಿಸಲಿದ್ದಾರೆ. ಸತ್ಯರತ್ನಂ ಅವರೇ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ