ಹಿಜಾಬ್ ಧರಿಸಿ ಮಕ್ಕಳು ಪರೀಕ್ಷೆ ಬರೆಯಲು ಅವಕಾಶ ನೀಡಿ : ಸಿಎಂ ಬೊಮ್ಮಾಯಿಗೆ 61 ಸಾಹಿತಿಗಳಿಂದ ಪತ್ರ!

ಬೆಂಗಳೂರು:

ರಾಜ್ಯದಲ್ಲಿ ಧರ್ಮ ಸಂಘರ್ಷ ಮುಂದುವರಿದಿದ್ದು, ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವುದು ಸರಿಯಲ್ಲ. ಮುಸ್ಲಿಂ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಕಾನೂನು ತಿದ್ದುಪಡಿ ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ 61 ಸಾಹಿತಿಗಳು ಪತ್ರ ಬರೆದಿದ್ದಾರೆ.

ಸಂತೋಷ್ ಕೆ ಪಾಟೀಲ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇವೆ : ಕೆ ಎಸ್ ಈಶ್ವರಪ್ಪ

ಡಾ.ಕೆ.ಮರುಳ ಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ರೆಹಮತ್ ತರಿಕೆರೆ ಸೇರಿ ಒಟ್ಟು 61 ಸಾಹಿತಿಗಳು ಈ ಸಂಬಂಧ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದು, ಸಮವಸ್ತ್ರದೊಂದಿಗೆ ಹಿಜಬ್‍ಗೂ ಅವಕಾಶ ಕೊಡಿ, ಪಠ್ಯದಲ್ಲಿ ಭಗವದ್ಗೀತೆಗಿಂತ ಸಂವಿಧಾನವನ್ನು ಓದುವುದು ಅತ್ಯಗತ್ಯ. ಹೀಗಾಗಿ ಭಗವದ್ಗೀತೆಯನ್ನು ಪಠ್ಯದಲ್ಲಿ ಕೈಬಿಡುವಂತೆ ಹಾಗೂ ಸಮವಸ್ತ್ರದ ಭಾಗವಾಗಿಯೇ ಶಿರವಸ್ತ್ರ ಧರಿಸಿ ಪರೀಕ್ಷೆಗೆ ಅನುಮತಿಸಿ. ಸದ್ಯ ಇರುವ ವಸ್ತ್ರಸಂಹಿತೆ ಸುತ್ತೋಲೆ ಅವೈಜ್ಞಾನಿಕ, ಹಿಂತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ನಿಷೇಧ ಸರಿಯಲ್ಲ. ಎಲ್ಲ ಜಾತ್ರೆ, ಉತ್ಸವಗಳು ಒಂದು ಧರ್ಮದ, ಜಾತಿಯ ಉತ್ಸವಗಳಾಗಿ ಜಾತ್ರೆ ನಡೆಯಲ್ಲ. ಸಾಮರಸ್ಯದ ನಾಡಿನಲ್ಲಿ ಮುಸ್ಲಿಂ ವರ್ತಕರ ಬಹಿಷ್ಕಾರ ಅಸಂವಿಧಾನಿಕ ನಡೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನಾಲ್ಕು ಲಕ್ಷ ಹೊಸ ಬಿಪಿಎಲ್ ಕಾರ್ಡ್, ತಿಂಗಳೊಳಗೆ ವಿತರಣೆ: ಸಚಿವ ಉಮೇಶ್ ಕತ್ತಿ ಭರವಸೆ

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap