ಸಂವಿಧಾನದ ಆಶಯಗಳಿಗೆ ತಕ್ಕಂತೆ ನಡೆಯೋಣ

ತುಮಕೂರು:

   ಸಂವಿಧಾನದ ಆಶಯಗಳಿಗೆ ತಕ್ಕಂತೆ ನಡೆಯೋಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ) ವೈ ಎಸ್ ಸಿದ್ದೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತುಮಕೂರು ವಿ.ವಿ. ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಕಲಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಶುಕ್ರವಾರ ಏರ್ಪಡಿಸಿದ್ದ ‘ಸಂವಿಧಾನ ದಿನ’ದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಸಂವಿಧಾನದ ತತ್ವ ಆರ್ದಶಗಳನ್ನು ಪಾಲಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಬಾಳು ಮತ್ತು ಸಮಪಾಲು ಎಂದು ಉಲ್ಲೇಖಿಸಿದ್ದಾರೆ. ಅದರಂತೆ ಸಮಾಜದ ಎಲ್ಲಾ ವರ್ಗದ ಜನರಿಗೂ ಕೂಡ ನ್ಯಾಯ ದೊರಕಿಸಿಲು ಶ್ರಮಿಸಿದ್ದಾರೆ. ನಾವು ಸಂವಿಧಾನ ಮಂತ್ರವನ್ನು ಪ್ರತಿನಿತ್ಯ ಜಪಿಸಬೇಕು ಎಂದರು.

ಡಾ. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಜಿ.ಬಸವರಾಜ ಮಾತನಾಡಿ, ಭಾರತದ ಸಂವಿಧಾನದ ಪ್ರಸ್ತಾವನೆಯು ಜಾತ್ಯಾತೀತ, ಪ್ರಜಾಸತಾತ್ಮಕ ಗಣರಾಜ್ಯದ ಅಂಶಗಳನ್ನೊಳಗೊಂಡಿದೆ.ಎಲ್ಲರಿಗೂ ರಾಜಕೀಯ, ಆರ್ಥಿಕ ಮತ್ತು ಧಾರ್ಮಿಕ ಸ್ಥಾನಮಾನಗಳನ್ನು ಹಂಚಿಕೆ ಮಾಡಲಾಗಿದೆ. ಮಿಶ್ರ ಆರ್ಥಿಕ ವ್ಯವಸ್ಥೆಯಲ್ಲಿ ದೇಶವನ್ನು ಮುನ್ನಡೆಸುತ್ತಿದ್ದು, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ ಎಂದರು.

ಪರೀಕ್ಷಾಂಗ ಕುಲಸಚಿವ ಪ್ರೊ. ನಿರ್ಮಲ್‍ರಾಜುಮಾತನಾಡಿ, ಭಾರತದ ಸಂವಿಧಾನವು ಎಲ್ಲರಿಗೂ ಸಮಾನವಾದ ಹಕ್ಕುಗಳನ್ನು ನೀಡುವುದರ ಮೂಲಕ ಸದೃಢ ಸಮಾಜಕ್ಕೆ ಭಧ್ರ ಬುನಾದಿಯನ್ನು ಹಾಕಿದೆ. ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕವಾದ ಕಾನೂನುಗಳನ್ನು ರೂಪಿಸಲಾಗಿದೆ ಎಂದರು.

ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ರಾಮಚಂದ್ರಪ್ಪ, ನುಡಿದಂತೆ ನಡೆಯುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಗೌರವ ಎಂದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ ಉಪಕುಲಸಚಿವರಾದಡಾ.ಗುಂಡೇಗೌಡ ಸ್ವಾಗತಿಸಿದರು.ಉಪನ್ಯಾಸಕಿ ಯಮುನಾಶ್ರೀ ವಂದಿಸಿದರು. ಪತ್ರಿಕೋದ್ಯಮ ಸಹಾಯಕ ಪ್ರಾಧ್ಯಾಪಕ ಡಾ. ಸಿಬಂತಿ ಪದ್ಮನಾಭ ನಿರೂಪಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap