ಬೆಂಗಳೂರು
ಬಿಗ್ ಬಾಸ್ ಮನೆಯಲ್ಲಿ ಹಲ್ ಚಲ್ ಎಬ್ಬಿಸಿರುವ ವಕೀಲ ಜಗದೀಶ್ ಹಣೆ ಬರಹವನ್ನು ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಬಿಡಿಸಿಟ್ಟಿದ್ದು, ನಕಲಿ ಪದವಿ ಆಧಾರದ ಮೇಲೆ ಪಡೆದಿದ್ದ ಲಾಯರ್ ಲೈಸೆನ್ಸ್ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ.
ಇವರು ಫೇಕ್ ಮಾರ್ಕ್ಸ್ ಕಾರ್ಡ್ ಕೊಟ್ಟು ಪದವಿ ಹಾಗೂ ಎಲ್‌ಎಲ್‌ಬಿ ಪದವಿ ಮಾಡಿ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರು. ಇದೀಗ ನಕಲಿ ಮಾರ್ಕ್ಸ್ ಕಾರ್ಡ್ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಕೀಲಿಕೆ ಸನ್ನದು (ಅಡ್ವೋಕೇಟ್ ಬಾರ್ ಕೌನ್ಸಿಲ್ ನೀಡಿದ್ದ ಲೈಸೆನ್ಸ್) ಅನ್ನು ರದ್ದುಗೊಳಿಸಿ ದೆಹಲಿ ಬಾರ್ ಕೌನ್ಸಿಲ್ ಆದೇಶ ಹೊರಡಿಸಿದೆ.
ಈಗಾಗಲೇ ಸುಮಾರು 40ಕ್ಕೂ ಅಧಿಕ ವರ್ಷ ವಯಸ್ಸಾಗಿದ್ದರೂ ಕೇವಲ 10 ವರ್ಷ ವಕೀಲಿಕೆ ಸೇವೆ ಮಾಡಿದ್ದಾಗಿ ಹೇಳಿಕೊಂಡಿರುವ ಲಾಯರ್ ಜಗದೀಶ್ ಮೇಲೆ ಸ್ವಲ್ಪ ಅನುಮಾನ ವ್ಯಕ್ತವಾಗಿತ್ತು. ಆದರೆ, ಇದೀಗ ಅವರು ಪಿಯುಸಿಯನ್ನೇ ಓದದೇ ನಕಲಿ ಮಾರ್ಕ್ಸ್ ಕಾರ್ಡ್ ಸೃಷ್ಟಿಸಿ, ಅದನ್ನು ಪದವಿ ಕಾಲೇಜಿಗೆ ಕೊಟ್ಟು ಡಿಗ್ರಿ ಮಾಡಿದ್ದಾರೆ. ನಂತರ, ಪದವಿ ಮೇಲೆ ಎಲ್‌ಎಲ್‌ಬಿ ಮಾಡಿದ್ದಾರೆ. ಬೆಂಗಳೂರಿನ ಬದಲು ದೆಹಲಿಗೆ ಹೋಗಿ ದೆಹಲಿ ಬಾರ್ ಕೌನ್ಸಿಲ್‌ನಲ್ಲಿ ಎಲ್‌ಎಲ್‌ಬಿ ಮೇಲೆ ಬಾರ್ ಕೌನ್ಸಿಲ್‌ನಿಂದ ವಕೀಲಿಕೆ ಸನ್ನದು ಪಡೆದಿದ್ದಾರೆ.
ಇವರದ್ದು ನಕಲಿ ಸರ್ಟಿಫಿಕೇಟ್ ಎಂದು ಬಾರ್ ಕೌನ್ಸಿಲ್ ಲೈಸೆನ್ಸ್ ರದ್ದತಿಗೆ ಕೋರಿ ಹಿಮಾಂಶು ಭಾಟಿ ಎನ್ನುವವರು ಕೌನ್ಸಿಲ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಸಮೇತ ಮಾಹಿತಿ ಹಂಚಿಕೊಂಡಿರುವ ಬಿಜ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಅವರು ಹಂಚಿಕೊಂಡ ದಾಖಲೆ ಅನುಸಾರ ಸುದ್ದಿ ಪ್ರಕಟಿಸಲಾಗಿದೆ.