ಹಾವೇರಿ:
ಹಾವೇರಿ ಜಿಲ್ಲೆ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಕಾಮುಕನೊಬ್ಬ ಪುತ್ರಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಬಾಲಕಿಗೆ ಮಂತ್ಲಿ ಪಿರಿಯಡ್ಸ್ ನಿಂತ ಬಗ್ಗೆ ಅನುಮಾನಗೊಂಡ ತಾಯಿ ವಿಚಾರಿಸಿದ್ದಾರೆ.
ಈ ವೇಳೆ ಮಗಳು ತಂದೆಯಿಂದ ನಿರಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಗ್ಗೆ ಮಾಹಿತಿ ನೀಡಿದ್ದಾಳೆ.
ನನಗೆ ಹುಟ್ಟಿಲ್ಲ, ಆಕೆ ನನ್ನ ಮಗಳಲ್ಲ ಎಂದು ಚಿತ್ರಹಿಂಸೆ ನೀಡುತ್ತಿದ್ದ ಆರೋಪಿ ಪತ್ನಿ ಮನೆಯಿಂದ ಹೊರಗೆ ಹೋದ ಸಂದರ್ಭದಲ್ಲಿ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ವಿಷಯ ತಿಳಿದ ಬಾಲಕಿ ತಾಯಿ ಮತ್ತು ಸಂಬಂಧಿಕರು ಹಂಸಭಾವಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ