ಜಾನುವಾರುಗಳ ಆಯಂಬುಲೆನ್ಸ್‌ : ನಾಳೆ ಚಾಲನೆ

ಬೆಂಗಳೂರು:

 ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಸಂಚಾರಿ ಪಶು ಚಿಕಿತ್ಸಾಲಯ(ಆಯಂಬುಲೆನ್ಸ್‌)ಸೇವೆ ಮೇ 7ರಂದು ಉದ್ಘಾಟನೆಗೊಳ್ಳಲಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ತಿಳಿಸಿದರು.ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7ರಂದು ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಪಶು ಸಂಗೋಪನೆ ಸಚಿವ ಪರುಷೋತ್ತಮ್‌ ರೂಪಾಲ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ರಾಜ್ಯದ ಸಚಿವರ ಸಮ್ಮುಖದಲ್ಲಿ ಈ ಸೇವೆಗೆ ಚಾಲನೆ ನೀಡಲಿರುವರು ಎಂದರು.

ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯ ನಾಳೆ ಗ್ಯಾಜುವೇಷನ್ ದಿನ

ನಾಡಿನ ಜಾನುವಾರುಗಳ ಆರೋಗ್ಯ ಸೇವೆಗಾಗಿ 275 ಆಯಂಬುಲೆನ್ಸ್‌ಗಳ ಪೈಕಿ 70 ಆಯಂಬುಲೆನ್ಸ್‌ಗಳಿಗೆ ಮೊದಲ ಹಂತದಲ್ಲಿ ಚಾಲನೆ ನೀಡಲಾಗುವುದು. ರಾಜ್ಯದಲ್ಲಿ ದನ, ಎಮ್ಮೆ, ಕುರಿ, ಮೇಕೆ ಮತ್ತು ಹಂದಿ ಸೇರಿದಂತೆ 2.90 ಕೋಟಿ ಜಾನುವಾರುಗಳಿದ್ದು, ಪ್ರತೀ ಒಂದು ಲಕ್ಷ ಜಾನುವಾರುಗಳಿಗೆ ಒಂದು ಸಂಚಾರಿ ಚಿಕಿತ್ಸಾ ವಾಹನದಂತೆ 275 ವಾಹನ ಒದಗಿಸಲಾಗುತ್ತಿದೆ ಎಂದವರು ವಿವರಿಸಿದರು.

 ರಾಜ್ಯದ ಶಾಲೆಗಳಲ್ಲಿ ಪುಸಕ್ತ ಶೈಕ್ಷಣಿಕ ವರ್ಷದಿಂದಲೇ `ಭಗವದ್ಗೀತೆ’ ಬೋಧನೆ!

 

ಸಂಚಾರಿ ಪಶು ಚಿಕಿತ್ಸಾ ವಾಹನಗಳ ನಿಗಾ ವ್ಯವಸ್ಥೆಗಾಗಿ ಪ್ರತ್ಯೇಕ ಕಾಲ್‌ ಸೆಂಟರ್‌ ಸ್ಥಾಪಿಸಲಾಗಿದ್ದು, ರೈತರಿಂದ ಟ್ರೋಲ್‌ ಪ್ರೀ ಸಂಖ್ಯೆ 1962ಕ್ಕೆ ಕರೆ ಬಂದ ತತ್‌ಕ್ಷಣ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಾಗುವುದು. ಪ್ರತೀ ಚಿಕಿತ್ಸಾ ವಾಹನದಲ್ಲಿ ಪಶು ವೈದ್ಯರು, ಪಶು ವೈದ್ಯ ಸಹಾಯಕ ಮತ್ತು ವಾಹನ ಚಾಲಕ ಕಂ ಡಿ. ದರ್ಜೆ ನೌಕರರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಪ್ರಭು ಚವ್ಹಾಣ್‌ ಹೇಳಿದರು.

ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್​ಮನ್ ಆತ್ಮಹತ್ಯೆ! ಗೃಹಪ್ರವೇಶಕ್ಕೂ 2 ದಿನ ಮೊದಲೇ ದುರಂತ, ಆ ರಾತ್ರಿ ತೋಟದಲ್ಲಿ

 

ರೈತರಿಗೆ, ಜಾನುವಾರು ಸಾಕಾಣಿಕೆದಾರರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಜಾನುವಾರುಗಳ ಸಂರಕ್ಷಣೆ, ಪಾಲನೆ ಮತ್ತು ಆರೋಗ್ಯ ರಕ್ಷಣೆಗಾಗಿ ಸುಸಜ್ಜಿತ ಶಸ್ತ್ರ ಚಿಕಿತ್ಸಾ ವಾಹನಗಳ ಮೂಲಕ ಪಶು ಸಂಜೀವಿನಿ ಯೋಜನೆ ಜಾರಿಗೆ ತರಲಾಗಿತ್ತು. ಇದರ ಮುಂದುವರಿದ ಭಾಗವೇ ಸಂಚಾರಿ ಪಶು ಚಿಕಿತ್ಸಾ ವಾಹನವಾಗಿದೆ ಎಂದು ಪ್ರಭು ಚವ್ಹಾಣ್‌ ತಿಳಿಸಿದರು.

ಮೇ 13ರಂದು ಜಲಧಾರೆ ಸಮಾವೇಶ: 5 ಲಕ್ಷಕ್ಕೂ ಹೆಚ್ಚು ಜನ ಭಾಗಿ ನಿರೀಕ್ಷೆ

 

ಪಶು ಸಂಗೋಪನೆ ಇಲಾಖೆಯಿಂದ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆ, ಪಶು ಸಂಜೀವಿನಿ ಆಯಂಬುಲೆನ್ಸ್‌, ಗೋಹತ್ಯೆ ನಿಷೇಧ ಕಾಯ್ದೆಯನ್ನು ಅನುಷ್ಟಾನಗೊಳಿಸಲಾಗಿದೆ. ದೇಶದ ಮೊದಲ ಪ್ರಾಣಿ ಕಲ್ಯಾಣ ಸಹಾಯ ವಾಣಿ ಕೇಂದ್ರ(ವಾರ್‌ ರೂಮ್ )ಸ್ಥಾಪನೆ, ಜಿಲ್ಲೆಗೊಂದು ಸರಕಾರಿ ಗೋಶಾಲೆ ನಿರ್ಮಾಣ,

ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಕಾ ತೆಗೆದರೆ ಅಲ್ಲೇ ಬಂದು ಹೊಡೆಯುತ್ತೇವೆ; ಮುಸ್ಲಿಂ ಡಿಫೆನ್ಸ್​ ಫೋರ್ಸ್​ ವಾಟ್ಸ್​ಆಯಪ್​ ಗ್ರೂಪ್​​ನಲ್ಲಿ ಬೆದರಿಕೆ ಸಂದೇಶ

ಪಶುಗಳ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲು ಲಸಿಕಾ ಅಭಿಯಾನ, ಪಶುವೈದ್ಯರು ಮತ್ತು ಸಿಬಂದಿ ನೇಮಕಾತಿ ಮಾಡಲಾಗಿದೆ. ಪ್ರತೀ ಲೀಟರ್‌ ಹಾಲಿಗೆ 5ರೂ. ಪ್ರೋತ್ಸಾಹಧನ, ಆಕಸ್ಮಿಕ ಮರಣ ಹೊಂದಿದ ಕುರಿ ಮತ್ತು ಮೇಕೆಗಳಿಗೆ ಅನುಗ್ರಹ ಯೋಜನೆಯಡಿ ಪರಿಹಾರಧನ ವಿತರಿಸಲಾಗಿದೆ ಎಂದು ತಿಳಿಸಿದರು.

         ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap