ಬೆಂಗಳೂರು
ಕಲಬುರಗಿ ಮತ್ತು ಬೆಳಗಾವಿ ನಗರಗಳಿಗೆ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಶ್ವಬ್ಯಾಂಕ್ ನೆರವಿನಿಂದ “ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯನ್ನು ಕಳೆದ 2013ರಲ್ಲೇ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆದಾರರು ತೋರುತ್ತಿರುವ ನಿರಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ವಿನ್ಯಾಸ, ನಿರ್ಮಾಣ, ನಿರ್ವಹಣೆ ಮತ್ತು ಹಸ್ತಾಂತರ [ ಡಿ.ಬಿ.ಓ.ಟಿ ] ಮಾದರಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ.
ಈ ಕುರಿತು ಹೊಸದಾಗಿ ಗುತ್ತಿಗೆ ಕರೆಯುವಂತೆ ಕೆ.ಯು.ಐ.ಡಿ.ಎಫ್.ಸಿ.ಗೆ ಅನುಮೋದನೆ ನೀಡಲಾಗಿದ್ದು, ಯೋಜನೆಗೆ ಮಂಜೂರಾಗಿರುವ ಸಾಲವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸೂಚಿಸಿದೆ.
ವಿಶ್ವ ಬ್ಯಾಂಕ್‍ನ ಸಾಲದ ಮರುಪಾವತಿ ಅವಧಿಯನ್ನು ವಿಸ್ತರಿಸುವ ಜತೆಗೆ ಅಗತ್ಯವಿರುವ ಹೆಚ್ಚುವರಿ ಸಾಲ ಪಡೆಯಲು ಮತ್ತೊಂದು ಪ್ರಸ್ತಾವನೆ ಸಲ್ಲಿಸಲು ಸಹ ನಿರ್ಧರಿಸಲಾಗಿದೆ.