ಶಿರಾ
ನಗರದ ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಕಾಟಾ ಹೆಚ್ಚಾಗಿದ್ದು ಈ ಕೂಡಲೇ ನಗರಸಭೆಯು ಗಮನ ಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಪ್ರ. ಕಾರ್ಯದರ್ಶಿ ಬಾಬು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.ನಗರದ ಬಹುತೇಕ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ನಗರಸಭೆಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಗರದ ಶಾಲಿ ನಗರದಲ್ಲಿ ಸೋಮವಾರ ಸುಮಾರು 5 ಕ್ಕೂ ಹೆಚ್ಚು ಬಿದಿ ನಾಯಿಗಳು ಬಾಲಕನ ಮೇಲೆ ಆಕ್ರಮಣ ಮಾಡಿ ಗಾಯಗೊಳಿಸಿದ್ದು ಈ ಕೂಡಲೇ ನಗರಸಭೆಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ