ನವದೆಹಲಿ:
ನೆರೆಯ ಭೂತಾನ್ ದೇಶದ 12ನೇ ಪಂಚ ವಾರ್ಷಿಕ ಯೋಜನೆಗಾಗಿ 4,500 ಕೋಟಿ ರೂ. ನೆರವನ್ನು ಭಾರತ ಸರ್ಕಾರ ಇಂದು ಘೋಷಿಸಿದ್ದು. ಭೂತಾನ್ನ ಪ್ರಧಾನಿ ಲೊಟೆ ತ್ಹೆರಿಂಗ್ ಇಂದು ದೆಹಲಿಯಲ್ಲಿ ಪ್ರಧಾನಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಲಾಗಿದೆ.
ಇದೆ ಸಂದರ್ಭದಲ್ಲಿ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧ ವೃದ್ಧಿಸುವ ಕುರಿತು ಹಾಗೂ ಮುಖ್ಯವಾಗಿ ಮಂಗೀಶು ಜಲವಿದ್ಯುತ್ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವ ಕುರಿತು ಚರ್ಚಿಸಲಾಯಿತು ಎಂದು ಪ್ರಧಾನಿ ಮೋದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ತಿಂಗಳು ಭೂತಾನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ತ್ಹೆರಿಂಗ್ ಗುರುವಾರ ಭಾರತಕ್ಕೆ ಆಗಮಿಸಿದ್ದರು. ಶುಕ್ರವಾರ ಬೆಳಗ್ಗೆ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸ್ವಾಗತ ಕೋರಲಾಯಿತು. ಇದಕ್ಕೂ ಮುನ್ನ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ ತ್ಹೆರಿಂಗ್ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.