ಅಂಬೇಡ್ಕರ್ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾದವರಲ್ಲ : ಎನ್.ಮಹೇಶ್

ಬೆಂಗಳೂರು

        ದೇಶದ ಸಾಮಾನ್ಯ ಜನರ ಬದುಕನ್ನು ದಷ್ಟಿಯಲ್ಲಿಟ್ಟುಕೊಂಡು ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುವ ಅವಕಾಶವನ್ನು ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಮಾಡಿಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಎನ್.ಮಹೇಶ್ ತಿಳಿಸಿದರು.

        ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 62ನೇ ಪರಿನಿಬ್ಬಾಣ ದಿನದ ಅಂಗವಾಗಿ ಶಿವಾಜಿನಗರದ ಬಿಎಸ್ಪಿ ಕೇಂದ್ರ ಕಚೇರಿಯಲ್ಲಿ ಬಿಎಸ್ಪಿ ನಾಯಕರು ಅಂಬೇಡ್ಕರ್‍ರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಸಂವಿಧಾನ ರಚಿಸಿದ ಅಂಬೇಡ್ಕರ್ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾದವರಲ್ಲ ಎಂದರು.

        ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಮಾತನಾಡಿ, ಭಾರತದಂತಹ ವೈವಿಧ್ಯಮಯ ಮತ್ತು ವಿಶಾಲ ರಾಷ್ಟ್ರಕ್ಕೆ ಎಲ್ಲರೂ ಒಪ್ಪುವಂತಹ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯ ಪೂರ್ಣಗೊಳ್ಳಲು ಸಮ ಸಮಾಜ ನಿರ್ಮಾಣವಾಗಬೇಕು ಎಂದು ನುಡಿದರು.

        ಬಾಬಾ ಸಹೇಬ್ ಅವರು ಪಡೆದುಕೊಂಡ ಅಪ್ರತಿಮ ಜ್ಞಾನದ ಫಲವಾಗಿ ದೇಶಕ್ಕೆ ಅತ್ಯುನ್ನತ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದ ಅವರು, ವಿಚಾರಧಾರೆಗಳು ವಿಶ್ವ ವ್ಯಾಪಿಯಾದ್ದದು. ಅವರನ್ನು ವಿಶ್ವದಾದ್ಯಂತ ಜನ ಸ್ಮರಿಸುತ್ತಿದ್ದಾರೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಉಸ್ತುವಾರಿ ಎಂ.ಎಲ್.ತೋಮರ್, ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಹಾರಿರಾಮ್ ಸೇರಿದಂತೆ ಬಿಎಸ್ಪಿ ನಗರ ಘಟಕದ ಮುಖಂಡರು ಪಾಲ್ಗೊಂಡಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link