ಬಳ್ಳಾರಿ
ಬೆಂಗಳೂರು ಹೊರತುಪಡಿಸಿದರೆ ಹಾಸನ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿರುವ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರಿಂದಾಗಿ ರಾಜ್ಯದಲ್ಲಿ ಅರಾಜಕತೆ ತುಂಬದೆ ಎಂದು ಮಾಜಿ ಸಿಎಂ ಜಗಧೀಶ್ ಶೆಟ್ಟರ್ ಕಿಡಿ ಕಾರಿದ್ದಾರೆ.
ಹೊಸಪೇಟೆಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವೇ 100ಕ್ಕೂ ಅಧಿಕ ತಾಲೂಕುಗಳಲ್ಲಿ ಬರವಿದೆ ಎಂದು ಹೇಳಿದೆ. ಇದುವರೆಗೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಬರಪೀಡಿತ ತಾಲೂಕುಗಳಿಗೆ ಭೇಟಿ ನೀಡಿಲ್ಲ. ಐಎಎಸ್ ಮಾಡಿದ ಅಧಿಕಾರಿಗಳು ಬರಪೀಡಿತ ಪ್ರದೇಶಗಳ ವರದಿ ತಯಾರಿಸಿಲ್ಲ. ಕಂದಾಯ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಅಧಿಕಾರಿಗಳೆಲ್ಲ ಇನ್ನೂ ಬರದ ಕುರಿತು ಕ್ರಿಯಾ ಯೋಜನೆ ಸಿದ್ಧ ಪಡಿಸಿಲ್ಲ. ರೈತರು ಗುಳೆ ಹೋಗುತ್ತಿದ್ದಾರೆ. ಜಾನುವಾರುಗಳೀಗೆ ಕುಡಿವ ನೀರು, ಮೇವು ಬ್ಯಾಂಕ್ ಸ್ಥಾಪಿಸಿಲ್ಲ. ನಷ್ಟ ಹೊಂದಿದ ಎಲ್ಲ ರೈತರಿಗೂ ಎಕರೆಗೆ ರೂ.25 ಸಾವಿರ ಹೆಚ್ಚುವರಿಯಾಗಿ ಅನುದಾನ ನೀಡಬೇಕೆಂದು ಒತ್ತಾಯಿಸಿದರು.
ಅಧಿಕಾರಿಗಳು ಈ ಕೂಡಲೇ ಬರಪೀಡಿತ ಪ್ರದೇಶಗಳಿಗೆ ತೆರಳಿ ವರದಿ ಸಿದ್ಧಪಡಿಸಬೇಕು. ರೈತರು ಆತ್ಮಹತ್ಯೆಗೆ ಶರಣಾಗುವ ಮುನ್ನ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕಾರ್ಯ ಚುರುಕುಗೊಳಿಸಬೇಕು. ಮುಖ್ಯವಾಗಿ ಗೋಶಾಲೆಗಳನ್ನು ತೆರೆದು ದನಕರುಗಳನ್ನು ರಕ್ಷಿಸಬೇಕು. ನರೇಗಾ ಯೋಜನೆಯಡಿ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬೇಕು. ಗುಳೆಹೋಗುವ ಜನರನ್ನು ನರೇಗಾ ಯೋಜನೆಯಡಿ ಬಳಸಿಕೊಳ್ಳಬೇಕು. ರೈತರನ್ನು ಅದರಲ್ಲೂ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕದ ಜನರನ್ನು ಕಡೆಗಣಿಸಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾದ ಅಸಹನೆ ವ್ಯಕ್ತವಾಗುತ್ತಿದೆ. ರೈತರ ಹಿತದೃಷ್ಟಿಯಿಂದ ಡಿ.10ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ