ಚಿಕ್ಕನಾಯಕನಹಳ್ಳಿ
ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಚರಂಡಿಯ ನೀರು ಮನೆಗಳಿಗೆ ಹರಿಯುತ್ತಿದೆ, ಗ್ರಾಮ ಪಂಚಾಯಿತಿ ಸಮರ್ಪಕವಾದ ಚರಂಡಿ ನಿರ್ಮಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಗ್ರಾಮದ ನಿವಾಸಿಗಳು ಹಲವು ವರ್ಷಗಳಿಂದ ಚರಂಡಿ ನಿರ್ಮಿಸಿ ನಮ್ಮ ಆರೋಗ್ಯಕ್ಕೆ ರಕ್ಷಣೆ ನೀಡಿ ಎಂದು ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ, ಯಾವ ಅಧಿಕಾರಿಯೂ ಸ್ಪಂದಿಸುತ್ತಿಲ್ಲ ಎಂದು ದೂರಿರುವ ಗ್ರಾಮಸ್ಥರು, ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಈ ರಸ್ತೆಯ ಮೂಲಕವೇ ಹೋಗಬೇಕಾಗಿದೆ. ಇಲ್ಲಿ ಕಸ ಶೇಖರಣೆಯಾಗಿ ತಿಪ್ಪೆಯಂತಾಗಿ ಅನಾರೋಗ್ಯ ಸೃಷ್ಟಿಯಾಗುತ್ತಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ನಮ್ಮ ಮನವಿಗೆ ಸ್ಪಂದಿಸುವಂತೆ ಮುದ್ದೇನಹಳ್ಳಿ ಗ್ರಾಮಸ್ಥರು ಕೋರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








