ಎಂ ಎನ್ ಕೋಟೆ :

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಾಕಷ್ವು ಸೌಲಭ್ಯಗಳು ಸಿಗುತ್ತಿವೆ ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲ್ಲೂಕ್ ಪಂಚಾಯಿತಿ ಸದಸ್ಯೆ ಕರಿಯಮ್ಮ ರಮೇಶ್ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಮಂಚಲದೊರೆ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರ ಸಾಕಷ್ವು ಸೌಲಭ್ಯಗಳನ್ನು ಕೊಡುತ್ತಿದೆ. ಆದರೆ ರೈತರಿಗೆ ಸಮರ್ಪಕವಾದ ಮಾಹಿತಿಗಳು ಸಿಗುತ್ತಿಲ್ಲ ಆದ್ದರಿಂದ ಗ್ರಾಮ ಪಂಚಾಯಿತಿಯವರು , ಇಲಾಖೆಯವರು ರೈತರಿಗೆ ಸಮರ್ಪಕವಾದ ಮಾಹಿತಿಯನ್ನು ಕೊಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ , ಬದು ನಿರ್ಮಾಣ , ಚೆಕ್ ಡ್ಯಾಂಗಳನ್ನು ಉದ್ಯೋಗ ಖಾತ್ರಿಯೋಜನೆಯಲ್ಲಿ ಮಾಡಿಕೊಳ್ಳಬೇಕು. ಜೂತೆಗೆ ಸರ್ಕಾರದಿಂದ ಬರುವ ಅನುದಾನವನ್ನು ಸಮರ್ಪಕವಾಗಿ ರೈತರಿಗೆ ಕೊಡಬೆಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮೀ , ತಾಲ್ಲೂಕ್ ನೋಡಲ್ ಅಧಿಕಾರಿ ಹೊನ್ನಪ್ಪ , ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಯೋಗಾನಂದ್ , ತೋಟಗಾರಿಕೆ ಅಧಿಕಾರಿ ಮಂಜುನಾಥ್ , ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಣ್ಣ , ಕಲ್ಪನಾಬಾಯಿ , ಪಿಡಿಓ ರಾಜೇಂದ್ರ ಪ್ರಸಾದ್ , ಕಾರ್ಯದರ್ಶಿ ರಾಮಣ್ಣ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
