ಹಾವೇರಿ
ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಆತ್ಮವಿಶ್ವಾಸ, ಇಚ್ಛಾಶಕ್ತಿ, ಶಿಸ್ತುಬದ್ಧವಾದ ಉತ್ತಮ ಯೋಚನೆಗಳಿಂದ ಅಭ್ಯಾಸಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶಿಲ್ಪಾ ನಾಗ್ ಅವರು ಹೇಳಿದರು.
ಮಂಗಳವಾರ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರುಗಳ ಸಹಯೋಗದಲ್ಲಿ ನಗರದ ಸರಕಾರಿ ಕನ್ನಡ ಪ್ರೌಢಶಾಲೆಯಲ್ಲಿ ಆಯೋಜಿಸಲಾದ 2018-19ನೇ ಸಾಲಿನಲ್ಲಿ ಓದುತ್ತಿರುವ 9 ಮತ್ತು 10ನೇ ತರಗತಿಯ ಎಸ್.ಸಿ, ಎಸ್.ಟಿ. ಮತ್ತು ಕಲಿಕೆಯಲ್ಲಿ ಹಿಂದುಳಿದ ಇತರೆ ವರ್ಗದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ವಿಶೇಷ ಬೋಧನಾ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನ ಅತ್ಯಂತ ಅಪ್ರತಿಯೊಬ್ಬರು ತಮ್ಮ ಭವಿಷ್ಯದ ಬಗ್ಗೆ ಉತ್ತಮವಾದ ಕನಸ್ಸು ಕಾಣಬೇಕು. ವಿದ್ಯಾಭ್ಯಾಸ ಉತ್ತೇಜನಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಗಳ ಸದುಪಯೋಗಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಅವರು ಮಾತನಾಡಿ, ಈ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಬಸವಲಿಂಗಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವಣ್ಣ ಸಿ., ಮುಖ್ಯೋಪಾಧ್ಯಾಯ ಎಸ್.ಪಿ.ಮೂಡಲದವರ, ಎಫ್.ಬಿ.ಮರಡೂರ, ಎಂ.ಎಸ್.ಪುರದ, ಎಸ್.ಸಿ.ಅಡವಿ, ಶ್ರೀಮತಿ ಪಿ.ಎಸ್.ಬಿದರಿ, ಶ್ರೀಮತಿ ಸುನಿತಾ, ಸಿದ್ಧರಾಜು ಎಸ್. ಅವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ