ತುಮಕೂರು
ಶ್ರೀ ಗುರುಸಿದ್ದೇಶ್ವರಸ್ವಾಮಿ ಸಹಕಾರ ಸಂಘದ ಉದ್ಘಾಟನಾ ಸಮಾರಂಭವು ನಾಳೆ (ಫೆ.10) ಭಾನುವಾರ ಬೆಳಿಗ್ಗೆ 10.30ಕ್ಕೆ ತುಮಕೂರಿನ ಹೊರಪೇಟೆಯ ಕರಿಬಸವಸ್ವಾಮಿ ಮಠದ ಪಕ್ಕದ ಬಾಪೂಜಿ ಹೈಸ್ಕೂಲ್ ಆವರಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮಿಗಳು, ಸಿದ್ಧರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾಮಠದ ಮಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ ಇವರು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಶ್ರೀ ಗುರುಸಿದ್ದೇಶ್ವರ ಸ್ವಾಮಿ ಸಹಕಾರ ಸಂಘದ ಅಧ್ಯಕ್ಷರಾದ ನಾ.ಚಂ.ಗಂಗಾಧರಶಾಸ್ತ್ರಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಟಿ.ಬಿ.ಶೇಖರ್, ಸಿ.ವಿ.ಮಹದೇವಯ್ಯ , ಎಂ.ಬಸವಯ್ಯ , ಟಿ.ಎ.ದಕ್ಷಿಣಾಮೂರ್ತಿ ಪಾಲ್ಗೊಂಡು ವಿವಿಧ ಸರ್ಟಿಫಿಕೇಟ್‍ಗಳನ್ನು ವಿತರಿಸುವರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
