ಬೆಂಗಳೂರು
ವೀಸಾ ನಿಯಮಗಳನ್ನು ಉಲ್ಲಂಘಿಸಿ ಸ್ವದೇಶಕ್ಕೆ ವಾಪಸಾಗದೇ ಅಕ್ರಮವಾಗಿ ನೆಲಸಿ ಕೊಕೇನ್, ಎಂಡಿಎಂಎ ಇನ್ನಿತರ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ..
ನೈಜೀರಿಯಾದ ಅನ್ಬೇರಾ ರಾಜ್ಯದ ಬಂಧಿತ ಆರೋಪಿ ಜೋಸೆಫ್ ಬೆಂಜಮಿನ್ (29)ನಿಂದ 3 ಲಕ್ಷ ಮೌಲ್ಯದ 20 ಗ್ರಾಂ ಕೊಕೇನ್, 9 ಗ್ರಾಂ ಎಂಡಿಎಂಎ, 36 ಮಾದಕ ಮಾತ್ರೆಗಳು, ಬೈಕ್, ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ಕೆಆರ್ ಪುರಂನ ಟಿಸಿ ಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದು, ಐಟಿ-ಬಿಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಆರೋಪಿಯು ವ್ಯಾಪಾರಿ ವೀಸಾದಲ್ಲಿ ದೇಶಕ್ಕೆ ಬಂದಿದ್ದು, ಪಾಸ್ ಪೋರ್ಟ್, ವೀಸಾ ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ. ಟಿಸಿ ಪಾಳ್ಯದಿಂದ ಕಾವೇರಿ ಲೇಔಟ್‍ಗೆ ಹೋಗುವ ರಸ್ತೆಯಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದು, ಖಚಿತ ಮಾದರಿಯಾಧರಿಸಿ ಕಾರ್ಯಾಚರಣೆ ನಡೆಸಿ ಬಂಧಿಸಿ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/41.gif)