ಪದವಿಪೂರ್ವ ಶಿಕ್ಷಣ ಇಲಾಖೆ ಕ್ರಮಕ್ಕೆ ತೀವ್ರ ವಿರೋಧ

ಬೆಂಗಳೂರು

         ಬರುವ ಲೋಕಸಭೆ ಚುನಾವಣೆಯನ್ನು ನೆಪವಾಗಿಟ್ಟುಕೊಂಡು ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಅವಧಿಗೂ ಮುನ್ನ ನಡೆಸಲು ಮುಂದಾಗಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

         ಪ್ರತೀ ವರ್ಷ ಫೆಬ್ರವರಿ ಮಧ್ಯಭಾಗದಲ್ಲಿ ಪರೀಕ್ಷೆಗಳನ್ನು ಆರಂಭಿಸಿ ತಿಂಗಳಾಂತ್ಯ ಇಲ್ಲವೇ ಮಾರ್ಚ್ ಮೊದಲ ವಾರದಲ್ಲಿ ಪೂರ್ಣಗೊಳಿಸಲಾಗುತ್ತಿತ್ತು. ಆದರೆ, ಈ ಬಾರಿ ಜನವರಿ 31 ರಿಂದಲೇ ಪರೀಕ್ಷೆ ಆರಂಭಿಸಲು ಮುಂದಾಗಿರುವ ಶಿಕ್ಷಣ ಇಲಾಖೆ ಕ್ರಮವನ್ನು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸಿದ್ದಾರೆ. 

          ಉಪನ್ಯಾಸಕರು ಪಠ್ಯಕ್ರಮಗಳನ್ನು ತರಾತುರಿಯಲ್ಲಿ ಪೂರ್ಣಗೊಳಿಸಬೇಕಾದ ಪರಿಸ್ಥಿತಿ ಎದುರಿಸಬೇಕು. ಉಳಿದಂತೆ ವಿದ್ಯಾರ್ಥಿಗಳು ಎಲ್ಲ ಪಠ್ಯಕ್ರಮಗಳನ್ನು ಅತಿ ಕಡಿಮೆ ಸಮಯದಲ್ಲಿ ಪರೀಕ್ಷಾ ದೃಷ್ಠಿಯಿಂದ ಅಭ್ಯಾಸ ಮಾಡಬೇಕಾಗಿದೆ.

        ಜೂನ್‍ನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಉತ್ತೀರ್ಣರಾದವರಿಗೆ ಆಗಸ್ಟ್, ಸೆಪ್ಟೆಂಬರ್‍ನಲ್ಲಿ ಪಿಯುಸಿಗೆ ಪ್ರವೇಶಾವಕಾಶವನ್ನು ನೀಡಲಾಗಿದೆ. ಸೆಪ್ಟೆಂಬರ್‍ನಲಿಪಿಯುಸಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಜನವರಿ ಅಂತ್ಯದ ವೇಳೆಗೆ ಪಿಯುಸಿ ಪ್ರಥಮ ವರ್ಷದ ಪರೀಕ್ಷೆಯನ್ನು ಎದುರಿಸಬೇಕಾಗಿದೆ. ಅತೀ ಕಡಿಮೆ ಅವಧಿಯಲ್ಲಿ ಪಠ್ಯಕ್ರಮಗಳನ್ನು ಪೂರ್ಣಗೊಳಿಸಿ ಪರೀಕ್ಷೆಗೆ ಸಿದ್ಧಗೊಳ್ಳುವುದು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಪಿಯು ಇಲಾಖೆ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

         ಬರುವ ಮೇ 2 ರಿಂದಲೇ ತರಗತಿಗಳು ಆರಂಭವಾಗಲಿವೆ. ಬೇಸಿಗೆ ರಜೆ ಮೊಟಕುಗೊಳಿಸಿ ಪಿಯುಸಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಉಪನ್ಯಾಸಕರುಗಳು ಎಂದಿನಂತೆ ಕಾಲೇಜಿಗೆ ಹಾಜರಾದರೂ ಸಹ ವಿದ್ಯಾರ್ಥಿಗಳು ಮಾತ್ರ ಮೇ ಅಂತ್ಯದವರೆಗೂ ಕಾಲೇಜಿಗೆ ಹಾಜರಾಗಿರಲಿಲ್ಲ. ಈ ಸಾಲಿನಲ್ಲೂ ಇದು ಪುನರಾವರ್ತನೆಯಾಗುವ ಸಾಧ್ಯತೆಗಳಿವೆ.

          ಫೆ. 10 ರಿಂದ ಪರೀಕ್ಷೆ ಆರಂಭಿಸಿದರೂ 22ರವರೆಗೆ ಪರೀಕ್ಷೆಗಳನ್ನು ಪೂರ್ಣಗೊಳಿಸಬಹುದಾಗಿದೆ. ಉಳಿದಂತೆ 10 ದಿನ ಮೊದಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿದರೂ ಸಹ ವಿದ್ಯಾರ್ಥಿಗಳಿಗೆ ಪೂರ್ಣಪ್ರಮಾಣದ ಅಧ್ಯಯನ ಸಾಧ್ಯವಾಗುವುದಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap