911 ದ್ವಿಚಕ್ರ ಗಸ್ತು ವಾಹನಗಳ ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರು

        ಬೆಂಗಳೂರು ನಗರದಲ್ಲಿ ಹಾಡು ಹಗಲೇ ಸರಗಳ್ಳತನ, ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವುದನ್ನು ತಡೆಗಟ್ಟಿ ಮಹಿಳೆಯರಲ್ಲಿ ಆತ್ಮ ಸ್ಥೈರ್ಯ ತುಂಬಬೇಕೆಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೊಲೀಸರಿಗೆ ಆದೇಶ ನೀಡಿದ್ದಾರೆ.

        ವಿಧಾನಸೌಧ ಮುಂಭಾಗ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಜಂಟಿಯಾಗಿ ಪೊಲೀಸ್ ಸಿಬ್ಬಂದಿಗೆ 911 ದ್ವಿಚಕ್ರ ಗಸ್ತು ವಾಹನಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಸರಗಳ್ಳಗರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮಹಿಳೆಯರು ನಿರ್ಭೀತಿಯಿಂದ ಓಡಾಡುವ ಪರಿಸ್ಥಿತಿಯಿಲ್ಲ. ಅವರಲ್ಲಿ ಆತ್ಮ ಸ್ಥೈರ್ಯ ತುಂಬ ಕೆಲಸ ಮಾಡಬೇಕೆಂದು ಸೂಚಿಸಿದರು.

        ಪೊಲೀಸ್ ಸಿಬ್ಬಂದಿ ಪರವಾಗಿ ಸರ್ಕಾರ ಇರುತ್ತದೆ. ಕಾನೂನು ಸುವ್ಯವಸ್ಥೆ ರಕ್ಷಿಸಲು ಬೆಂಗಳೂರು ನಗರದಲ್ಲಿ ಹೆಚ್ಚು ಸಿಸಿ ಟಿವಿಗಳನ್ನು ಅಳವಡಿಸಲಾಗುವುದು. ಒಟ್ಟಾರೆ ಕಾನೂನು ಬಾಹಿರ ಚಟುವಟಿಕೆಗಳಿಗೆ ಸಂಪೂರ್ಣವಾಗಿ ತಡೆಯೊಡ್ಡಲು ಕ್ರಮ ಕೈಗೊಳ್ಳುತ್ತೇವೆ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪೆಲೀಸ್ ಇಲಾಖೆ ವಿಶ್ವಾಸ ಮೂಡಿಸುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಬೆಂಗಳೂರು ನಾಗರೀಕರ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪೆಲೀಸರಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು.
ಕೆಳ ಹಂತದ ಪೆಲೀಸರಿಗೆ ಹೊಸ ವರ್ಷದಲ್ಲಿ ಉಡುಗೊರೆ ನೀಡಲಾಗುವುದು. ಪೆಲೀಸರ ಕಲ್ಯಾಣಕ್ಕಾಗಿ ಹಿರಿಯ ಐಪಿಎಸ್ ಅಧಿಕಾರಿಗಳು ನೀಡಿರುವ ವರದಿಗಳನ್ನ ಜಾರಿ ಮಾಡಲು ಚಿಂತನೆ ಮಾಡಲಾಗಿದೆ. ಬೆಂಗಳೂರಿನ ಸಂಖ್ಯೆಗೆ ಅನುಗುಣವಾಗಿ ಪೆಲೀಸ್ ನಿಯೋಜನೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

          ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು, ಬೆಂಗಳೂರು ಪೊಲೀಸ್ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಇಲಾಖೆಗೆ ಇನ್ನಷ್ಟು ಬಲ ತುಂಬಲು ಮತ್ತು ಗುಸ್ತು ತಿರುಗಲು 911 ದ್ವಿಚಕ್ರ ವಾಹನಗಳನ್ನು ನೀಡಲಾಗಿದೆ. ಈಗಾಗಲೇ 300 ಹೊಯ್ಸಳ ಕಾರುಗಳು ಗಸ್ತು ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಹೊಂದಿದೆ. ಆದರೆ ಕೆಲ ಬೀದಿಗಳಿಗೆ ಕಾರುಗಳು ಹೋಗಲು ಸಾಧ್ಯವಿಲ್ಲ. ಹೀಗಾಗಿ ನಗರದೆಲ್ಲೆಡೆ ಗಸ್ತು ತಿರುಗಲು ಬೈಕ್ ನೀಡಲಾಗಿದ್ದು, ಇದು ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದರು.

           ಹೊಸ ವರ್ಷ ಸಮೀಪಿಸುತ್ತಿದ್ದು, ಈ ಆಚರಣೆ ನಗರದೆಲ್ಲೆಡೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲ ಮಾಡಿಕೊಡಲು ಈ ವಾಹನಗಳು ಅನುಕೂಲ ಕಲ್ಪಿಸಲಿವೆ. ಡಿಸೆಂಬರ್ 31 ರಾತ್ರಿ ಹಾಗೂ ಜನರವರಿ 1ರಂದು ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಸೂಕ್ತ ಕಾರ್ಯತಂತ್ರ ರೂಪಿಸುವಂತೆ ಪರಮೇಶ್ವರ್ ಪೊಲೀಸರಿಗೆ ನಿರ್ದೇಶನ ನೀಡಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ