ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ನಷ್ಟ…!!!

ಬೆಂಗಳೂರು

         ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸಿದ್ಧಉಡುಪುಗಳು ಸುಟ್ಟು ಹೋಗಿರುವ ಘಟನೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯ ಮುಖ್ಯರಸ್ತೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

     ನಗರ್ತಪೇಟೆಯ ಮುಖ್ಯರಸ್ತೆಯ ಸಿದ್ಧಉಡುಪುಗಳ ಬಟ್ಟೆ ಅಂಗಡಿಗೆ ಮುಂಜಾನೆ 3ರ ವೇಳೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಆಕಸ್ಮಿಕ ಬೆಂಕಿ ತಗುಲಿ ಅಂಗಡಿಯಿಂದ ಬೆಂಕಿ ಹೊರಬರಲಾರಂಭಿಸಿದೆ.

       ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಬೆಂಕಿಯಿಂದ ಲಕ್ಷಾಂತರ ಮೌಲ್ಯದ ಬಟ್ಟೆಗಳು ಸುಟ್ಟು ಹೋಗಿವೆ. ಹಲಸೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link