ಹಾವೇರಿ
ದೇಶದ ಹಿತದೃಷ್ಟಿಯಿಂದ ಕಾಂಗ್ರೆಸ್ ಅಧ್ಯಕ್ಚ ರಾಹುಲ್ ಗಾಂಧಿ ಒಮ್ಮೆ ಪ್ರಧಾನಿಯಾಗಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಕಾಂಗ್ರೆಸ್ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಇಲ್ಲಿ ಸೇರಿದ ಜನಸ್ತೋಮವನ್ನು ನೋಡಿದರೆ ಲೋಕಸಭೆ ಚುನಾವಣೆಯನ್ನು ಗೆದ್ದಂತೆ ಭಾಸವಾಗುತ್ತಿದೆ. ರಾಹುಲ್ ಗಾಂಧಿ ಪ್ರಧಾನಿಯಾಗುವ ಕನಸು ಙಸಾಗಲಿದೆ ಎಂದು ವಿಧ್ವಾಸ ವ್ಯಕ್ತಪಡಿಸಿದರು.
ಸಮಾವೇಶಕ್ಕೆ ಗದಗ ಹಾಗೂ ಹಾವೇರಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಇತಿಹಾಸ ನಿರ್ಮಾಣವಾಗಿದೆ ಎಂದ ಅವರು ಚೌಕಿದಾರ್ ಚೋರ್ ಹೈ,ಚೌಕೀದಾರ ಚೋರಿಕರ್ ಗಯಾ” ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರುಗಳಿಗೆ ಮಾತ್ರ ಅಚ್ಛೇದಿನ್ ಬಂದಿದೆಯಡೆ ಹೊರತು ಬಿಜೆಪಿಗೆ ಇದು ಸಾಧ್ಯವಿಲ್ಲ. ದೇಶಕ್ಕೋಸ್ಕರ ಒಂದು ಬಾರಿ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಬೇಕು. ಎರಡು ಬಾರಿ ಬಿಜೆಪಿಯಿಂದ ಸಂಸದರಾಗಿರುವ ಶಿವಕುಮಾರ್ ಉದಾಸಿ ಜಿಲ್ಲೆಯಲ್ಲಿ ಎಲ್ಲಿಯೂ ಕಾಣಿಸುತ್ತಿಲ್ಲ. ಜನರ ಸಮಸ್ಯೆಯನ್ನು ಗಮನಿಸದೇ ಅವರು ಎಲ್ಲಿ ಹೋಗಿದ್ದಾರೆ ಗೊತ್ತಿಲ್ಲ ಎನ್ನುವ ಮೂಲಕ ಶಿವಕುಮಾರ್ ಉದಾಸಿಯವರ ಕಾಲೆಳೆದರು.
ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ,ದೇಶದ ಮಹಿಳೆಯರಿಗೆ ಮಾತ್ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಶಕ್ತಿಯಿದೆ ಎಂದರು.
ಶಾಸನಸಭೆಗಳಲ್ಲಿ ಶೇ.33 ರಷ್ಟು ಮಹಿಳಾ ಮೀಸಲಾತಿ ಬಗ್ಗೆ ಕೇಂದ್ರ ಬಿಜೆಪಿ ನಾಯಕರು ತಲೆ ಮೆಡಿಸಿ ಕೊಂಡಿಲ್ಲ. ಮಹಿಳಾ ವಿರೋಧ ನೀತಿ ಅನುಸರಿಸುವ ಬಿಜೆಪಿಯಿಂದ ಮಹಿಳಾ ಸಬಲೀಕರಣ ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಟಿಬದ್ಧರಾಗಿದ್ದಾರೆ ಎಂದರು.
ತೈಲಬೆಲೆ ಹೆಚ್ಚಳ, ನೋಟು ಅಮಾನ್ಯೀಕರಣದಿಂದ ಅತಿಹೆಚ್ಚು ಮಹಿಳೆಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಈ ಬಗ್ಗೆ ಮಹಿಳಯೆರು ಬಿಜೆಪಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಸಮಯ ಬಂದಿದೆ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳಾ ದೌರ್ಜನ್ಯ, ಅತ್ಯಾಚಾರ ಹೆಚ್ಚು ನಡೆಯುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮಹಿಳೆಯರು ಪಣತೊಡಬೇಕು ಎಂದು ಅವರು ಕರೆ ನೀಡಿದರು.