ಬೆಂಗಳೂರು
ವೇಗವಾಗಿ ಬಂದ ಕಾರು ಪೊಲೀಸ್ ಹೊಯ್ಸಳ ವಾಹನಕ್ಕೆ ಡಿಕ್ಕಿ ಹೊಡೆದು ಮೂವರು ಪೊಲೀಸರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುರುವಾರ ತಡರಾತ್ರಿ ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್ ಬಳಿ ನಡೆದಿದೆ
ಹೊಯ್ಸಳ ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ದೂರು ಬಂದ ಹಿನ್ನೆಲೆಯಲ್ಲಿ ರಾತ್ರಿ 12ರ ವೇಳೆ ಕೋಣನಕುಂಟೆ ಕ್ರಾಸ್ ಬಳಿ ತೆರಳುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಸ್ವಿಫ್ಟ್‍ಕಾರು ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಅದೃಷ್ಟವಶಾತ್ ಮೂವರು ಪೊಲೀಸರು ಪ್ರಾಣಾಪಾಯದಿಂದ ಪಾರಗಿದ್ದಾರೆ.ಕುಡಿದ ಅಮಲಿನಲ್ಲಿ ಚಾಲಕ ವೇಗವಾಗಿ ಕಾರು ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದ್ದು ಚಾಲಕನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
