ಬೆಂಗಳೂರು
ಕೇಂದ್ರ ಸರ್ಕಾರ ಬರ ಪರಿಹಾರದ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಹಾರಾಷ್ಟ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಚುನಾವಣೆ ಹಿನ್ನೆಲೆಯಲ್ಲಿ ಈ ಅನ್ಯಾಯ ಆಗಿರಬಹುದು. ಅಗತ್ಯಬಿದ್ದರೆ ಮತ್ತೊಮ್ಮೆ ಪ್ರಧಾನಿ ಬಳಿ ನಿಯೋಗ ಕೊಂಡೊಯ್ದು ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
