ದಾವಣಗೆರೆ:
ತಾಲೂಕಿನ ಆನಗೋಡು ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎಂಟನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಭಾನುವಾರ ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆದ ಸಮ್ಮೇಳನ ಪೂರ್ವ ಸಿದ್ಧತಾ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಕಸಾಪ ಜಿಲ್ಲಾಧ್ಯಕ್ಷ ಮಂಜುನಾಥ ಕುರ್ಕಿ ಅವರ ಸಮ್ಮುಖದಲ್ಲಿ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಆನಗೋಡಿನಲ್ಲಿ ಎರಡು ದಿನಗಳ ಕಾಲ ಸಮ್ಮೇಳನ ನಡೆಸಲು ತೀರ್ಮಾನಿಸಿ, ಇನ್ನೊಮ್ಮೆ ಚರ್ಚಿಸಿ ದಿನಾಂಕ ನಿಗದಿ ಮಾಡಲು ನಿರ್ಧಾರ ಕೈಗೊಳ್ಳಲಾಯಿತು.
ಸಭೆಗೆ ಸ್ವಯಂಪ್ರೇರಿತರಾಗಿ ಆಗಮಿಸಿದ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಎಸ್. ಬಸವಂತಪ್ಪನವರು ಆನಗೋಡಿನಲ್ಲಿ ಸಮ್ಮೇಳನ ನಡೆಸಲು ಮನವಿ ಮಾಡಿದರು. ಇದಕ್ಕೆ ಸಭೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಲಾಯಿತು.
ಸಮ್ಮೇಳನದ ದಿನಾಂಕ ಪ್ರಕಟಗೊಂಡ ನಂತರ ಸರ್ವಾಧ್ಯಕ್ಷರನ್ನು ಸಮಿತಿ ಆಯ್ಕೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಪರಿಷತ್‍ನ ಮಹಿಳಾ ಪ್ರತಿನಿಧಿ ಯಶಾ ದಿನೇಶ್, ಗೌರವ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ ಶೆಣೈ, ಕಲಾವಿದ ಎ.ಮಹಾಲಿಂಗಪ್ಪ ಮಾತನಾಡಿದರು. ಪರಿಷತ್ ಗೌರವ ಕಾರ್ಯದರ್ಶಿ ಮಂಜುನಾಥ ಎಕಬೋಟೆ, ಎನ್.ಎಸ್.ರಾಜು, ಸಾಹಿತಿ ಶಾಂತಗಂಗಾಧರ, ಕೆ.ಎನ್.ಸ್ವಾಮಿ, ಷಣ್ಮುಖಪ್ಪ, ಕೆ.ರಾಘವೇಂದ್ರ ನಾಯರಿ, ದಿಳ್ಯಪ್ಪ, ಎಸ್.ಎಂ. ಮಲ್ಲಮ್ಮ, ಓಂಕಾರಮ್ಮ ರುದ್ರಮುನಿ ಸ್ವಾಮಿ, ರುದ್ರಾಕ್ಷಿಬಾಯಿ ಮತ್ತಿತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
