ತುರುವೇಕೆರೆ:
ಕೊರೋನಾ ಸೋಂಕು ತಾಲ್ಲೂಕಿನಾದ್ಯಂತ ಹರಡುತ್ತಿದ್ದು, ಅದನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ ಜು.17 ರಿಂದ ಜು.31 ರ ವರೆಗೆ ತುರುವೇಕೆರೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೆಳಿಗ್ಗೆ 6 ರಿಂದ ಮದ್ಯಾಹ್ನ 1 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗುವುದು. ಮಧ್ಯಾಹ್ನ 1 ಗಂಟೆ ನಂತರ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು, ತರಕಾರಿ, ಹೂ. ಹಣ್ಣು, ಸೇರಿದಂತೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿಸಲು ಸಂಬಂದಿಸಿದ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಶಾಸಕ ಮಸಾಲೆ ಜಯರಾಮ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು, ವರ್ತಕರ ಸಂಘದ ಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳ ಪಧಾಧಿಕಾರಿಗಳ ಸಮ್ಮುಖದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೋನಾ ದಿಂದ ಇತ್ತೀಚೆಗೆ ಸಾವಿರಾರು ಜನ ಸಾಯುತ್ತಿದ್ದಾರೆ. ಈ ರೋಗಕ್ಕೆ ಬಡವ ಶ್ರೀಮಂತ ಅಂತಾ ಭೇಧ ಬಾವವಿಲ್ಲ. ತಾಲ್ಲೂಕಿನಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಕೊರೋನ ವೈರಸ್ ಹರಡುವುದನ್ನು ತಪ್ಪಿಸುವ ಸಲುವಾಗಿ ಪಟ್ಟಣದ ನಾಗರೀಕರು ತಾಲ್ಲೂಕಿನ ಸಾರ್ವಜನಿಕರು ಸಹಕರಿಸಿ ಕೊರೋನಾ ತಡೆಯುವಲ್ಲಿ ಸಹಕಾರ ನೀಡಬೇಕು.
ಆ ನಿಟ್ಟಿನಲ್ಲಿ ಪಟ್ಟಣದ ಎಲ್ಲ ವರ್ತಕರು, ಬೀದಿಬದಿ ವ್ಯಾಪಾರಿಗಳು, ತರಕಾರಿ ವ್ಯಾಪಾರಿಗಳು ಹಾಗೂ ಮದ್ಯದಂಗಡಿ ಸೆರಿದಂತೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಕೊರೋನಾ ರೋಗಕ್ಕೆ ಲಗಾಮು ಹಾಕೋಣ. ಹೋಟೆಲ್‍ಗಳಲ್ಲಿ ಸ್ಟೀಲ್ ತಟ್ಟೆಗಳನ್ನು ಬಳಸದೆ ಬದಲಿ ವ್ಯವಸ್ಥೆ ಮಾಡಿಕೊಳ್ಳುವುದು. ಜನತೆ ಯಾವುದೆ ಕಾರಣಕ್ಕೂ ಅನಗತ್ಯ ಓಡಾಟ ನಿಲ್ಲಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳ ಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ಆಟೋಗಳು ಸಹಾ ರಸ್ತೆಗಿಳಿಯುವಂತಿಲ್ಲ. ನಿರ್ಲಕ್ಷಿಸಿದಲ್ಲಿ ಪ್ರಕರಣ ದಾಖಲಿಸಿ ದಂಡ ವಿಧಿಸುವ ಅಧಿಕಾರವನ್ನು ಪೋಲೀಸ್ ಹಾಗೂ ಸರ್ಕಾರಿ ಅಧಿಕಾರಿಗಳಿಗೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ವರ್ತಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್(ಆರ್.ರಾಜು), ಕಾರ್ಯದರ್ಶಿ ಎಸ್.ಎಂ. ಕುಮಾರಸ್ವಾಮಿ, ಜಿ.ಪಂ.ಮಾಜಿ ಸದಸ್ಯ ಎನ್. ಆರ್.ಜಯರಾಮ್, ರವಿ, ಪ್ರಕಾಶ್‍ಗುಪ್ತ, ಎಸ್.ಎಲ್.ಎನ್.ರಾಜಣ್ಣ ಸೇರಿದಂತೆ ಅಧಿಕಾರಿಗಳು ಹಾಗೂ ಇನ್ನಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
