ಆರ್ ಆರ್ ನಗರ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಎಫ್ ಐ ಆರ್ ..!

ಬೆಂಗಳೂರು:

     ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಯ ಸಿಬ್ಬಂದಿ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸದಾಶಿವ ನಗರದ ನಿವಾಸದಲ್ಲಿ ಇಂದು ತುರ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್‌ಆರ್‌ ನಗರದ ನಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಹೇಡಿತನ, ನೀಚತನದ ರಾಜಕಾರಣವಾಗಿದೆ.ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ನಾವು ಸಹಿಸುವುದಿಲ್ಲ ಎಂದರು.

    ಈಗಾಗಲೇ  ಸಾಕಷ್ಟು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ.ರಾಜಕಾರಣದಲ್ಲಿ ಕಣ್ಣು ಬಿಡುತ್ತಿರುವ ಅಭ್ಯರ್ಥಿ ಮೇಲೆ ಎಫ್‌ಐಆರ್‌ ದಾಖಲಿಸಿ ಪೊಲೀಸರು ಹಾಗೂ ಸರ್ಕಾರ ಅಧಿಕಾರದ ದುರ್ಬಳಕೆ ಮಾಡಿಕೊಂಡಿದೆ.ಇಂತಹ ನೀಚ ರಾಜಕಾರಣವನ್ನು ನಾನೆಂದೂ ನೋಡಿಲ್ಲ.ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕಿಡಿಕಾರಿದರು.

 

    ಈ ಬಗ್ಗೆ ಮುಖ್ಯಮಂತ್ರಿ  ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿರುವ ಡಿಕೆಶಿ, ಎಫ್ಐಆರ್ ಪ್ರಕರಣದ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಚುನಾವಣಾ ಆಯೋಗಕ್ಕೂ ದೂರು ನೀಡಲಿದ್ದೇವೆ ಎಂದು  ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap