ಹಾವೇರಿ
ಕರ್ಜಗಿ ಉಪ ಸಂರಕ್ಷಣಾಧಿಕಾರಿಗಳ ಪ್ರಾದೇಶಿಕ ವಿಭಾಗದ ನೂತನ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಗುರುವಾರ ಆಹಾರ ಮತ್ತು ನಾಗರಿಕ ಸರಬರಾಜು, ಹಜ್ ಹಾಗೂ ವಕ್ಫ್ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಕಚೇರಿ ಆಚರಣದಲ್ಲಿ ಸಸಿ ನೆಡುವುದರ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಹಾಗೂ ಪರಿಸರ ರಕ್ಷಣೆ ಅಂಗವಾಗಿ ಆಯೋಜಿಸಿದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್.ಶಂಕರ್, ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಶಾಸಕರಾದ ನೆಹರು ಓಲೇಕಾರ, ಬಿ.ಸಿ.ಪಾಟೀಲ, ವಿರಪಾಕ್ಷಪ್ಪ ಬಳ್ಳಾರಿ, ಜಿ.ಪಂ. ಉಪಾಧ್ಯಕ್ಷೆ ಶ್ರೀಮತಿ ದೀಪಾ ಅತ್ತಿಗೇರಿ, ಜಿ.ಪಂ.ಸದಸ್ಯರಾದ ಕೊಟ್ರೇಶಪ್ಪ ಬಸೇಗಣ್ಣಿ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಡಿ.ಎಫ್.ಓ. ಗಿರೀಶ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ