ಹಿರಿಯೂರು :
ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ನೇತೃತ್ವದಲ್ಲಿ ಆಲೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಜನ-ಜಾನುವಾರುಗಳಿಗೆ ಕುಡಿವ ನೀರಿಗೆ ಹಾಹಾಕಾರವಿದೆ. ಹಲವು ಬಾರಿ ಸಂಬಂಧಿಸಿದ ಇಲಾಖೆ, ಗ್ರಾಪಂ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಶೀಘ್ರವೇ ಕ್ರಮಕ್ಕೆ ಮುಂದಾಗದಿದ್ದರೆ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಮದ ನೂರಾರು ಗ್ರಾಮಸ್ಥರು, ಮಹಿಳೆಯರು ಖಾಲಿಕೊಡಗಳನ್ನು ಹಿಡಿದು ಆಲೂರು ಗ್ರಾಮದಿಂದ ಹಿರಿಯೂರಿನ ತಾಲೂಕು ಪಂಚಾಯಿತಿ ವರೆಗೆ ಪಾದಯಾತ್ರೆ ನಡೆಸಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ರಾಮಚಂದ್ರ, ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಕಸವನಹಳ್ಳಿರಮೇಶ್, ಶ್ರೀನಿವಾಸ್, ತಿಪ್ಪೇಸ್ವಾಮಿ, ಮಂಜುನಾಥ್, ರಾಮಚಂದ್ರಪ್ಪ ಇತರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
