ಬೆಂಗಳೂರು
ಶ್ವಾಸಕೋಶ ಸಮಸ್ಯೆಯಿಂದಾಗಿ ಕೇಂದ್ರ ಸಚಿವರೋರ್ವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಂದ್ರ ಸಚಿವ ಅನಂತ್‍ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿಯ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವರಿಗೆ ಶ್ವಾಸಕೋಶ ಸಮಸ್ಯೆಯಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ . ಕೇಂದ್ರ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ದೂರವಾಣಿ ಮೂಲಕ ಸಚಿವರ ಆರೋಗ್ಯ ವಿಚಾರಿಸಿದರು . ಸಂಜೆ ಸಚಿವ ರಾಜನಾಥ್ ಸಿಂಗ್ ಅವರು ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ..
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








