ರಾಜ್ಯ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು : ಈಶ್ವರಪ್ಪ

ಬೆಂಗಳೂರು

       ರಾಜ್ಯದಲ್ಲಿನ ಉಪಚುನಾವಣಾ ಫಲಿತಾಂಶದ ನಂತರ ರಾಜ್ಯ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

       ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಸಚಿವರು ಮತ್ತು ಮುಖಂಡರ ನಡುವೆ ಭಿನ್ನಾಭಿಪ್ರಾಯ ದಿನೇ ದಿನೇ ಹೆಚ್ಚಾಗುತ್ತಿದೆ. ಸಚಿವ ರಮೇಶ್ ಜಾರಕಿಹೊಳಿ ಮೂರು ಸಚಿವ ಸಂಪುಟ ಸಭೆಗಳಿಗೆ ಗೈರು ಹಾಜರಾಗಿದ್ದಾರೆ ಎಂದು ಅವರು ಹೇಳಿದರು.

       ಶಿವಮೊಗ್ಗ ಲೋಕಸಭಾ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಮಿತ್ರ ಪಕ್ಷಗಳು ಕಡೆ ಕ್ಷಣದವರೆಗೂ ಅಳೆದು ಸುರಿದು ಲೆಕ್ಕಚಾರ ಹಾಕುತ್ತಿವೆ ಎಂದು ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap