ಬೆಂಗಳೂರು
ಮಂಡ್ಯ ಲೋಕಸಭಾ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ಸದ್ಯದಲ್ಲೇ ಪ್ರಕಟಿಸಲಾಗುವುದೆಂದು ಪಕ್ಷದ ವರಿಷ್ಠರಾದ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.ಹಾಸನ ಜಿಲ್ಲೆ ಅರಕಲಗೂಡಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಮನಗರ ವಿಧಾನಸಭಾ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಯ ಆಯ್ಕೆ ಅಂತಿಮವಾಗಿದೆ ಎಂದರು.ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸ್ಥಾನಕ್ಕೆ ಎನ್.ಮಹೇಶ್ ರಾಜಿನಾಮೆ ಅವರ ಪಕ್ಷದ ಹೈಕಮಾಂಡ್ ತೀರ್ಮಾನ. ಇದಕ್ಕೂ ಮಹಾಘಟಬಂಧನಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ