ಬೆಂಗಳೂರು
ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಹಾನಿಯಾಗಿರುವ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಿ ತುರ್ತಾಗಿ ವಿಶೇಷ ಪ್ಯಾಕೇಜನ್ನು ಘೋಷಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದಲ್ಲಿ ಕಳೆದ 50 ವರ್ಷಗಳಲ್ಲಿ ಬೀಳದಷ್ಟು ಮಳೆ ಈ ಬಾರಿ ಸುರಿದಿದೆ. ಹೀಗಾಗಿ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆದು ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರು ಬೆಳೆದಿರುವ ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದಿದ್ದಾರೆ.
ಕರಾವಳಿ, ಮಲೆನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಅಡಕೆ ಬೆಳೆಗೆ ಹಳದಿ ಎಲೆ ರೋಗದ ಸಮಸ್ಯೆ ಕಾಡುತ್ತಿದೆ. ಹೈದ್ರಾಬಾದ್ ಮತ್ತು ಮುಂಬೈ ಕರ್ನಾಟಕದ ಭಾಗಗಳಲ್ಲಿ ಬೆಳೆ ಜೊತೆಗೆ ಸ್ಥಿರಾಸ್ತಿಗಳು ಕೂಡ ನಾಶವಾಗಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
