ಬೆಂಗಳೂರು
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಸಾವಿಗಿಂತ, ಮದ್ಯ ಸಿಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮದ್ಯದ ಅಂಗಡಿಗಳನ್ನು ತೆರೆಯಲು ಸೂಚಿಸಬೇಕು ಎಂದು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದೆ.
ರಾಜ್ಯದಲ್ಲಿ ಲಾಕ್ ಡೌನ್ ನಂತರ ವ್ಯಸನಿಗಳಿಗೆ ಮದ್ಯ ದೊರೆಯುತ್ತಿಲ್ಲ. ಎಲ್ಲೆಡೆ ಮದ್ಯದ ಅಂಗಡಿಗಳು ಬಂದ್ ಆಗಿರುವ ಪರಿಣಾಮ, ಮದ್ಯ ಸಿಗದೇ ಪರದಾಡುವಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಇದೇ ಖಿನ್ನತೆಯಲ್ಲಿ ಬಳಲುತ್ತಿದ್ದ ರಾಜ್ಯದ ಹಲವರು ಈಗಾಗಲೇ ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದಾರೆ. ಕೊರೊನಾ ಸೋಂಕಿನಿಂದ ನಾಲ್ವರು ಬಲಿಯಾದರೆ ಅದಕ್ಕಿಂತ ಹೆಚ್ಚು ಮಂದಿ ಮದ್ಯ ಸಿಗದೆ ಆತ್ಮಹತ್ಯೆ ಮಾಡಿಕೊಂಡವರು ಹೆಚ್ಚಾಗಿದೆ.
ಈ ಹಿನ್ನಲೆಯಲ್ಲಿ ಹೈಕೋರ್ಟ್ ಗೆ ಡಾ.ವಿನೋದ್ ಕುಲಕರ್ಣಿ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದನ್ನು ಸಲ್ಲಿಸಿ ರಾಜ್ಯದಲ್ಲಿ ಲಾಕ್ ಡೌನ್ ನಂತರ ಮದ್ಯ ದೊರೆಯುತ್ತಿಲ್ಲ. ಇದರಿಂದಾಗಿ ಖಿನ್ನತೆಗೆ ಒಳಗಾಗಿ ಅನೇಕ ಮದ್ಯ ವ್ಯಸನಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ವೈನ್ ಶಾಪ್ ತೆರೆಯಲು ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂಬುದಾಗಿ ಅರ್ಜಿಯಲ್ಲಿ ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ. ಇವರ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸುತ್ತದೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








