ಬೆಂಗಳೂರು ವಿಶ್ವವಿದ್ಯಾನಿಲಯ : ಆನ್ ಲೈನ್ ತರಗತಿ ಶುಲ್ಕ ಪಾವತಿ ದಿನಾಂಕ ಮುಂದೂಡಿಕೆ

ಬೆಂಗಳೂರು

      ಲಾಕ್‍ಡೌನ್ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯ ಆನ್‍ಲೈನ್ ಮೂಲಕ ನಡೆಸುತ್ತಿರುವ ತರಗತಿಗಳ ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ಮುಂದೂಡಿದೆ.

     ಪರೀಕ್ಷೆ ಶುಲ್ಕ ಪಾವತಿ ದಿನಾಂಕವನ್ನು ವಿಶ್ವ ವಿದ್ಯಾನಿಲಯದ ಪುನಾರಂಭಗೊಂಡ ನಂತರ ಪ್ರಕಟಿಸಲಾಗುವುದು. ಅಲ್ಲಿಯತನಕ ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ವಿದ್ಯಾರ್ಥಿಗಳು ವ್ಯಾಸಂಗದ ಕಡೆ ಹೆಚ್ಚು ಗಮನಹರಿಸಬೇಕು ಎಂದು ಕುಲಪತಿ ಪೆÇ್ರೀ. ಕೆ.ಆರ್. ವೇಣುಗೋಪಾಲ್ ಅವರು ತಿಳಿಸಿದ್ದಾರೆ.

     ಜೂಮ್ ತಂತ್ರಾಂಶ ಬಳಸುವ ಮೂಲಕ ಆನ್‍ಲೈನ್ ತರಗತಿಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಬೋಧನೆಯಲ್ಲಿ ವ್ಯತ್ಯಯ ಆಗದಂತೆ ವಿಭಾಗದ ಮುಖ್ಯಸ್ಥರು ಕ್ರಮ ಕೈಗೊಂಡಿದ್ದರು. ವಿದ್ಯಾರ್ಥಿಗಳಿಂದ ಆನ್‍ಲೈನ್ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, 90 ರಷ್ಟು ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗಳಿಗೆ ನೋಂದಾಯಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

     ಆನ್‍ಲೈನ್‍ನ ಸ್ಕೈಫ್, ಗೂಗಲ್, ಸಿಸ್ಕ್, ಜೂಮ್, ವೇಬೆಸ್ಕ್ ಮೂಲಕ ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಇತರ ಅಸೈನ್‍ಮೆಂಟ್‍ ಗಳನ್ನು ನೀಡಲಾಗುತ್ತಿದೆ. ಗ್ರಾಮೀಣಾ ಪ್ರದೇಶದ ವಿದ್ಯಾರ್ಥಿಗಳು ಅಂತರಜಾಲ ವೇಗ ಕಡಿತ ಗೊಂಡಿರುವ ಹಿನ್ನೆಲೆ ಸಮಸ್ಯೆ ಎದುರಿಸುತ್ತಿದ್ದರು. ಆನ್‍ಲೈನ್ ತರಗತಿಗೆ ಸಂತಸ ವ್ಯಕ್ತಪಡಿಸಿದ್ದು, ಮುಂದಿನ 2 ವಾರಗಳಲ್ಲಿ ಪಠ್ಯಕ್ರಮ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link