ತುಮಕೂರು :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬಿಡುಗಡೆ ಮಾಡಿರುವ ಇಂದಿನ ಕೊರೋನವೈರಸ್ ಪ್ರಕರಣದಲ್ಲಿ ಹೊಸದಾಗಿ 402 ಮಂದಿಗೆ ಕೋವಿಡ್ – 19 ದೃಢಪಟ್ಟಿದೆ ಎಂದು ಡಿಎಚ್ಒ ಡಾ. ನಾಗೇಂದ್ರಪ್ಪ ಮಾಹಿತಿಯನ್ನು ನೀಡಿದ್ದಾರೆ.
ಇಂದು ಬಿಡುಗಡೆ ಮಾಡಿರುವ ವರದಿಯಲ್ಲಿ 245 ಜನರು ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇದರಿಂದಾಗಿ ಒಟ್ಟು ಬಿಡುಗಡೆ ಹೊಂದಿರುವವರ ಸಂಖ್ಯೆ 12421 ಕ್ಕೆ ಏರಿಕೆ ಕಂಡಿದೆ ಹಾಗೂ 6ಸಾವಾಗಿದ್ದು ಹೊಸ ಪ್ರಕರಣಗಳು 402ಸೇರಿ 2609 ಜನರಿಗೆ ಜಿಲ್ಲೆಯ ಕೋವಿಡ್ – 19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಐಸಿಯುನಲ್ಲಿ 121 ಮಂದಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15361ಕ್ಕೆ ಏರಿಕೆಯಾಗಿದೆ ಎಂದರು. ತುಮಕೂರು ಜಿಲ್ಲೆಯಲ್ಲಿ ಒಟ್ಟಾರೆಯಾಗಿ 1,40,145 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ, ಅದರಲ್ಲಿ 1,20,930 ಮಾದರಿಗಳು ನೆಗೆಟಿವ್ ಎಂದು ವರದಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
