ಬೆಂಗಳೂರು
ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯಳನ್ನು ಈ ಹಿಂದೆ ಬ್ರಿಟೀಷರ ಕಾಲದಲ್ಲಿ ಕರಿನೀರಿನ ಕಾರಾಗೃಹ ಎಂದೇ ಖ್ಯಾತವಾಗಿರುವ ಅಂಡಮಾನ್ ಜೈಲಿನಲ್ಲಿಡುವುದು ಸೂಕ್ತ ಎಂದು ಮಾಜಿ ಸಂಸದ ಹಾಗೂ ಕಪಿಸಿಸಿ ವಕ್ತಾರ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಈ ರೀತಿಯ ವ್ಯಕ್ತಿಯನ್ನು ಅಂಡಮಾನ್ ಜೈಲಿನಲ್ಲಿ ಇಡುವುದು ಸೂಕ್ತ.
ಆಕೆಯ ವಿರುದ್ಧ ಜೀವನ ಪರ್ಯಂತ ಜೈಲಿನಲ್ಲಿ ಉಳಿಯುವಂತೆ ಕ್ರಮ ಕೈಗೊಳ್ಳಬಹುದು. ಒಬ್ಬ ಹೆಣ್ಣುಮಗಳು ಪಾಕಿಸ್ತಾನ ಪರ ಜಿಂದಾಬಾದ್ ಹಾಕಿರುವುದು ಅಕ್ಷಮ್ಯ ಅಪರಾಧ. ಯಾವುದೇ ಭಾರತೀಯರು ಇದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ. ಆಕೆ ಮಾತನಾಡುವ ಧಾಟಿ ನೋಡಿದರೆ ಯೋಚನೆ ಮಾಡಿಯೇ ಮಾತನಾಡಿದಂತಿದೆ. ಪ್ರಕರಣವನ್ನು ಶೀಘ್ರ ವಿಚಾರಸೆಗೊಳಪಡಿಸಿ ಕಠಿಣ ಶಿಕ್ಷೆ ನೀಡಬೇಕು.
ಇದಕ್ಕೆ ವಿಶೇಷ ಕೋರ್ಟ್ ಸ್ಥಾಪಿಸಿ ಶೀಘ್ರ ತೀರ್ಪು ನೀಡುವಂತಾಗಬೇಕು. ನಮಗೆ ದೇಶ ಮೊದಲು ನಮ್ಮ. ಶತ್ರು ರಾಷ್ಟ್ರಗಳ ಪರ ಘೋಷಣೆ ಕೂಗುವವರಿಗೆ ಭಾರತದಲ್ಲಿ ಸ್ಥಾನ ಇಲ್ಲ. ಈ ರೀತಿಯ ಹೇಳಿಕೆ ನೀಡುವವರ ಬಗ್ಗೆ ಮಾಹಿತಿ ಪಡೆಯಲು ಬೇಹುಗಾರಿಕೆ ಇಲಾಖೆ ಹೆಚ್ಚು ಬಲಿಷ್ಠಗೊಳ್ಳಬೇಕು ಎಂದು ಸಲಹೆ ಕೊಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ