ಬೆಂಗಳೂರು
ಹಿಂದಿನಿಂದ ವೇಗವಾಗಿ ಬಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಬೈಕ್ನಲ್ಲಿ ರಾತ್ರಿ ಪಾಳಯದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಮೆಟ್ರೋ ಗುತ್ತಿಗೆ ನೌಕರರೊಬ್ಬರು ಮೃತಪಟ್ಟಿರುವ ಧಾರುಣ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ದಾಸನಪುರದ ಜಗದೀಶ್ (25)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಖಾಸಗಿ ಕಂಪನಿಯ ಜೊತೆಗೆ ಮೆಟ್ರೋದಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಜಗದೀಶ್ ರಾತ್ರಿ 10ರ ವೇಳೆ ಮನೆಯಿಂದ ರಾತ್ರಿಪಾಳಯದ ಕೆಲಸಕ್ಕೆ ಬೈಕ್ನಲ್ಲಿ ಹೋಗುತ್ತಿದ್ದರು.
ಮಾರ್ಗಮಧ್ಯೆ ತುಮಕೂರು ರಸ್ತೆಯ ಮೇಲುಸೇತುವೆ ರಸ್ತೆಯಲ್ಲಿ ಪೀಣ್ಯ ಮೆಟ್ರೋ ನಿಲ್ದಾಣದ ಬಳಿ ಬರುತ್ತಿದ್ದಾಗ ಹಿಂದಿನಿಂದ ಬಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಜಗದೀಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಪ್ರಕರಣ ದಾಖಲಿಸಿರುವ ಪೀಣ್ಯ ಸಂಚಾರ ಪೊಲೀಸರು, ಲಾರಿ ಚಾಲಕನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
