ಜಿಎಸ್ ಟಿ ವಿಚಾರ: ರಾಜ್ಯವನ್ನು ಮತ್ತೆ ಕಡೆಗಣಿಸಿದ ಕೇಂದ್ರ : ಸಿದ್ದರಾಮಯ್ಯ

ಬೆಂಗಳೂರು

     ಕರ್ನಾಟಕವು ಕೊರೋನಾ ಸಂಕಷ್ಟದ ನಡುವೆಯು ರಾಜ್ಯ ಸರ್ಕಾರ ಶೇ.71.61 ರಷ್ಟು ಜಿಎಸ್ ಟಿ ಸಂಗ್ರಹ ಮಾಡಿದೆ.ಆದರೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ರೂ.13,764 ಕೋಟಿ ರೂ ಬಾಕಿ ಉಳಿ ಸಿಕೊಂಡಿದೆ.ಜನವರಿಯವರೆಗೆ ಇದು ರೂ.27,000 ಕೋಟಿ ರೂಗೆ ಏರಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ.ಕೇಂದ್ರವು 15ನೇ ಹಣಕಾಸು ಆಯೋಗದ ವರದಿಯಲ್ಲೂ ರಾಜ್ಯಕ್ಕೆ ಭೀಕರ ತಾರತಮ್ಯ ಮಾಡಿದೆ. ಈಗ ಜಿಎಸ್ ಟಿಯಲ್ಲೂ ದ್ರೋಹ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

     ನಿನ್ನೆ ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಆದ ತೀರ್ಮಾನವನ್ನು ವಿರೋಧಿಸಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಕೇಂದ್ರ ಸರ್ಕಾರವು ಕೋವಿಡ್-19 ನಿಂದಾಗಿ ಜಿಎಸ್ ಟಿ ಸಂಗ್ರಹದಲ್ಲಿ ರೂ.3 ಲಕ್ಷ ಕೋಟಿಗಳಷ್ಟು ಕೊರ ತೆಯಾಗಲಿದೆ ಹಾಗೂ ಜಿಎಸ್ ಟಿ ವ್ಯವಸ್ಥೆಯಿಂದ ಆಗಿರುವ ಆದಾಯ ಕೊರತೆ ರೂ.97,000 ಗಳಷ್ಟಾಗಲಿದೆ.ಇದ ರಲ್ಲಿ 2.35 ಲಕ್ಷ ಕೋಟಿ ರೂಪಾಯಿಗಳ ಜಿಎಸ್ಟಿ ಪರಿಹಾರವನ್ನು ಈ ವರ್ಷ ನೀಡಲಾಗು ವುದಿಲ್ಲವೆಂದು ತಿಳಿಸಿ ಆರ್ ಬಿಐ ನಿಂದ ಸಾಲ ಪಡೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ.

     ಕೇಂದ್ರ ಸರ್ಕಾರದ ಈ ನಿಲುವು ಸಂವಿಧಾನ ಬಾಹಿರ.ಸೆಕ್ಷನ್ 18 ರ ಪ್ರಕಾರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಜಿಎ ಸ್ ಟಿ ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕಾಗಿದೆ.ಇದನ್ನು ಪಡೆದುಕೊಳ್ಳುವುದು ರಾಜ್ಯಗಳ ಸಂವಿಧಾನಾ ತ್ಮಕ ಅಧಿಕಾರವಾಗಿದೆ.ಆದರೆ ಕೇಂದ್ರ ಸರ್ಕಾರವು ಒಕ್ಕೂಟ ತತ್ವದ ನಿಯಮಗಳಿಗೆ ವಿರುದ್ಧ ವಾಗಿ ವರ್ತಿಸುತ್ತಿದೆ. ತಾನು ಪರಿಹಾರ ನೀಡುವುದನ್ನು ತಪ್ಪಿಸಿಕೊಂಡು ರಾಜ್ಯಗಳು ಆರ್ಬಿಐ ನಿಂದ ಸಾಲ ಪಡೆದುಕೊಂಡು ಪರಿಸ್ಥಿತಿ ಯನ್ನು ನಿಭಾಯಿಸುವಂತೆ ಹೇಳುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಅತ್ಯಂತ ದೊಡ್ಡ ದ್ರೋಹವೆಂ ದು ಪರಿಗಣಿಸಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

     ರಾಜ್ಯಗಳಿಗೆ ನ್ಯಾಯಯುತವಾಗಿ ನೀಡಬೇಕಾದ ಪರಿಹಾರದ ಬದಲಾಗಿ ಸಾಲದ ರೂಪದಲ್ಲಿ ಹಣ ಪಡೆದರೆ ಅದ ನ್ನು ಬಡ್ಡಿ ಸಮೇತ ತೀರಿಸುವ ಜವಾಬ್ದಾರಿ ರಾಜ್ಯಗಳದ್ದಾಗಿರುತ್ತದೆ.ಇದರಿಂದಾಗಿ ರಾಜ್ಯಗಳ ಅಭಿವೃದ್ಧಿಗೆ ತೊಂ ದರೆಯಾಗುತ್ತದೆ.ಜಿಎಸ್ ಟಿ ನಿಯಮಗಳ ಪ್ರಕಾರ ಕೇಂದ್ರ ಸರ್ಕಾರವೇ ಸಾಲ ಪಡೆದು ರಾಜ್ಯಗಳಿಗೆ ಪರಿಹಾರವ ನ್ನು ನೀಡಬೇಕು.ಸಾಲಕ್ಕೆ ಕೇಂದ್ರ ಸರ್ಕಾರವೇ ಜವಾಬ್ದಾರಿಯಾಗಬೇಕೆ ಹೊರತು ಅದನ್ನು ಯಾವುದೇ ಕಾರಣ ಕ್ಕೂ ರಾಜ್ಯಗಳ ಮೇಲೆ ಹೊರಿಸಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

       ಈಗಾಗಲೇ ಕೇಂದ್ರ ಸರ್ಕಾರವು ತನ್ನ ದುಷ್ಟ ಆರ್ಥಿಕ ನೀತಿಗಳಿಂದಾಗಿ ರಾಜ್ಯಗಳ ತೆರಿಗೆಯ ಅಧಿಕಾರವನ್ನು ನಿಧಾನವಾಗಿ ಕಿತ್ತುಕೊಳ್ಳುತ್ತಿದೆ.ಎಪಿಎಂಸಿ ಕಾಯ್ದೆಯ ತಿದ್ದುಪಡಿ ಇದಕ್ಕೆ ಅತ್ಯುತ್ತಮ ನಿದರ್ಶನ.ರಾಜ್ಯಗಳ ಆರ್ಥಿಕ ಚೈತನ್ಯವನ್ನು ಸಂಪೂರ್ಣ ನಾಶ ಮಾಡಿ ದೇಶವನ್ನು ಬನಾನ ರಿಪಬ್ಲಿಕ್ ರೀತಿಯ ಆಡಳಿತ ವ್ಯವಸ್ಥೆಗೆ ದೇಶವನ್ನು ದೂಡಲು ಯತ್ನಿಸುತ್ತಿದೆ.ಕೇಂದ್ರ-ರಾಜ್ಯಗಳ ನಡುವೆ ಸಹಕಾರ ತತ್ವದ ಪ್ರಜಾಪ್ರಭುತ್ವ ಮಾದರಿಯ ವ್ಯವಸ್ಥೆ ಇರಬೇಕಾದ ಬದಲಿಗೆ ಸರ್ವಾಧಿಕಾರಿ ಪ್ರವೃತ್ತಿಯ ಕಡೆಗೆ ದೇಶವನ್ನು ದೂಡಲಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

    ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಒಂದೇ ಪಕ್ಷದ ಆಡಳಿತವಿದ್ದರೆ ಸ್ವರ್ಗವನ್ನು ಸೃಷ್ಟಿಸಿ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿದ್ದ ಬಿಜೆಪಿ ಸರ್ಕಾರಗಳು ರಾಜ್ಯದ ಜನರನ್ನು ಇನ್ನಿಲ್ಲದಂತೆ ಶೋಷಿಸುತ್ತಿವೆ.ಪೆಟ್ರೋಲ್,ಡೀಸೆ ಲ್ ದರ ರೂ.100/- ಗಳ ಹತ್ತಿರಕ್ಕೆ ತಲುಪುತ್ತಿದೆ.ಪೆಟ್ರೋಲ್, ಡೀಸೆಲ್‍ಗಳ ಮೇಲೆ ಕೇಂದ್ರವು ಅಮಾನವೀಯ ರೀತಿ ಯಲ್ಲಿ ತೆರಿಗೆ ಹಾಕುತ್ತಿವೆ.ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 40 ರಿಂದ 45 ಡಾಲರ್ಗಳಿಗೆ ಒಂದು ಬ್ಯಾರಲ್ ಕಚ್ಚಾ ತೈಲ ದೊರೆಯುತ್ತಿದೆ.ಸಂಸ್ಕರಣೆ, ಸಾಗಾಟ ಇತ್ಯಾದಿಗಳೆಲ್ಲವು ಸೇರಿದರೂ ರೂ.30/- ಗಳಿಗೆ ಒಂದು ಲೀಟರ್ ಪೆಟ್ರೋಲ್ ಅನ್ನು ಮಾರಬೇಕು.

     ಆದರೆ ಕೇಂದ್ರ ಸರ್ಕಾರವು ಜನರನ್ನು ಶತ್ರುಗಳೆಂದು ಭಾವಿಸಿ ತೆರಿಗೆ ಹಾಕುತ್ತಿದೆ. ಸಾಧ್ಯವಿರುವ ರೀತಿಯಲ್ಲೆಲ್ಲಾ ಜನರನ್ನು ಶೋಷಿಸುತ್ತಿರುವ ಅತ್ಯಂತ ಅಮಾನವೀಯ ಸರ್ಕಾರ ಇದು ಎಂದು ಕಿಡಿಕಾರಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಆರ್ ಬಿಐನಿಂದ ಸಾಲ ಪಡೆಯುವ ಆಯ್ಕೆ ಯನ್ನು ಮಾಡಿಕೊಳ್ಳಬಾರದು. ಹೀಗೆ ಮಾಡಿದರೆ ರಾಜ್ಯದ ಸಂವಿಧಾನಾತ್ಮಕ ಅಧಿಕಾರಗಳನ್ನು ಕೇಂದ್ರದ ಕಾಲಿ ನ ಕೆಳಗೆ ದೂಡಿದಂತಾಗುತ್ತದೆ.ಇದರಿಂದ ರಾಜ್ಯವು ಇನ್ನಷ್ಟು ಗುಲಾಮಗಿರಿಯ ಕಡೆಗೆ ಸಾಗುತ್ತದೆ ಎಂದು ಎಚ್ಚರಿ ಕೆ ನೀಡಿದ್ದಾರೆ.

    ರಾಜ್ಯದ ಪಾಲಿಗೆ ಬರಬೇಕಾದ ಜಿಎಸ್ ಟಿ ಪಾಲನ್ನು ನಿರ್ದಾಕ್ಷಿಣ್ಯವಾಗಿ ಕೇಂದ್ರದಿಂದ ಪಡೆದು ಕೊಳ್ಳಬೇಕು.ಈ ಮೂಲಕ ರಾಜ್ಯದ ಹಕ್ಕನ್ನು ಎತ್ತಿ ಹಿಡಿಯಬೇಕೆಂದು ಆಗ್ರಹಿಸುತ್ತೇನೆಂದು ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ