ಬೆಂಗಳೂರು :
ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ ಡಾ.ಗೋಪಾಲ ಕಾರಜೋಳ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಳೆದ ನಿನ್ನೆಯಷ್ಟೇ ತಮ್ಮ ಇಡೀ ಕುಟುಂಬ ಕೊರೋನಾ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಗುತ್ತಿಲ್ಲ ಎಂಬುದಾಗಿ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಅವರು ಕಣ್ಣೀರಿಟ್ಟಿದ್ದರು. ಇದರ ಬೆನ್ನಲ್ಲೇ, ಕೊರೋನಾ ಸೋಂಕಿಗೆ ತುತ್ತಾಗಿರುವಂತ ಡಿಸಿಎಂ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.
ಇದೀಗ ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಅವರು ಸೋಂಕಿನಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ನೀಡದರೂ ಗುಣಮುಖರಾಗಿಲ್ಲ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಗೋಪಾಲ ಕಾರಜೋಳ ಅವರನ್ನು ಚೆನ್ನೈ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅಂದಹಾಗೇ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಅವರ ಕುಟುಂಬಸ್ಥರಿಗೆ ಕೊರೋನಾ ಸೋಂಕು ತಗುಲಿತ್ತು. ಡಿಸಿಎಂ ಗೋವಿಂದ ಕಾರಜೋಳ ಅವರು ಕೊರೋನಾ ಸೋಂಕಿನ ಚಿಕಿತ್ಸೆಯ ನಂತ್ರ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ