ಕೊರೊನಾ ಬಗೆಗಿನ ಅಪಪ್ರಚಾರಕ್ಕೆ ಕಿವಿಗೊಡಬೇಡಿ

ದಾವಣಗೆರೆ:

    ಕೊರೊನಾ ಸೋಂಕಿನ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದು, ಅದಕ್ಕೆ ಸಾರ್ವಜನಿಕರ್ಯಾರೂ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ.ಹೊನ್ನಾಳಿಯಿಂದ ಮಾಡಿದ ವೀಡಿಯೋ ಸಂದೇಶದಲ್ಲಿ ಮಾತನಾಡಿರುವ ಅವರು, ಕೊರೊನಾ ಸೋಂಕು ದೃಢಪಟ್ಟಿವರಿಗೆ ಸರ್ಕಾರದಿಂದ ದುಡ್ಡು ಬರುತ್ತದೆ. ಅದರಲ್ಲಿ ವೈದ್ಯರು, ಆಸ್ಪತ್ರೆಯವರು ಹಣ ಹಂಚಿಕೆ ಮಾಡಿಕೊಳ್ಳುತ್ತಾರೆಂಬುದೆಲ್ಲಾ ಸುಳ್ಳು ಸುದ್ದಿಯಾಗಿದ್ದು, ಇದನ್ನು ಜನತೆ ನಂಬಬಾರದು ಎಂದು ಮನವಿ ಮಾಡಿದರು.

    ಜಗತ್ತಿನ ಎಲ್ಲಾ ದೇಶಗಳಲ್ಲೂ ಕೊರೊನಾ ಸೋಂಕು ಹರಡಿದ್ದು, ಅದಕ್ಕೆ ನಮ್ಮ ದೇಶ, ರಾಜ್ಯ, ಜಿಲ್ಲೆ ಹೊರತಾಗಿಲ್ಲ. ಸೋಂಕು ದೃಢಪಟ್ಟಿರುವವರಿಂದ ಮತ್ತಷ್ಟು ಜನರಿಗೆ ಸೋಂಕು ಹರಡಬಾರದೆಂಬ ಸದುದ್ದೇಶದಿಂದ ಕೊರೊನಾ ದೃಢಪಟ್ಟವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಅಷ್ಟೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಸೋಂಕು ಹರಡದಂತೆ ಮತ್ತು ಸಾವಿನ ಪ್ರಮಾಣ ನಿಯಂತ್ರಿಸಲು ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ಇದರಲ್ಲಿ ಯಾವುದೇ
ದುರುದ್ದೇಶವಿಲ್ಲ. ಜನರ ಆರೋಗ್ಯ, ಪ್ರಾಣ ಕಾಪಾಡುವ ಕಳಕಳಿ ಇದೆ. ನನ್ನ ಮನೆಯಲ್ಲೂ ಸಹೋದರ ಸೇರಿದಂತೆ ಕುಟುಂಬದ 6 ಜನ ಸದಸ್ಯರಲ್ಲಿ ಸೋಂಕು ದೃಢಪಟ್ಟಿದೆ. ನಾನು ಐದು ಬಾರಿ ಟೆಸ್ಟ್ ಮಾಡಿಸಿದರೂ ನೆಗೆಟಿವ್ ಎಂಬುದಾಗಿ ಬಂದಿದೆ ಎಂದು ತಿಳಿಸಿದ್ದಾರೆ.

    ಕೊರೊನಾ ಸೋಂಕು ರಾಜ್ಯದಲ್ಲಿ, ಜಿಲ್ಲೆಯಲ್ಲಿ ಕಂಡು ಬಂದಾಗಿನಿಂದಲೂ ಜಿಲ್ಲೆಯ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಬಡವರಿಗೆ ಆಹಾರ ಕಿಟ್‍ಗಳನ್ನು ವಿತರಿಸುತ್ತಿದ್ದೇನೆ. ಅದೇನೂ ಸರ್ಕಾರದ ಹಣವಲ್ಲ. ನನ್ನ ಸ್ವಂತ ಹಣದಲ್ಲಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ನನ್ನನ್ನೂ ಸೇರಿದಂತೆ ಜಿಲ್ಲಾಡಳತ, ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆ, ಪೌರ ಕಾರ್ಮಿಕರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಶುಶ್ರೂಷಕರು, ಆಸ್ಪತ್ರೆ ಸಿಬ್ಬಂದಿ ಹಗಲಿರುಳು ಎನ್ನದೇ, ತಮ್ಮ ಪ್ರಾಣ, ಕುಟುಂಬದ ಹಿತವನ್ನೇ ಬದಿಗಿಟ್ಟು, ಕೊರೊನಾ ವಿರುದ್ಧ ಹೋರಾಟ ನಡೆಸಿದ್ದಾರೆ. ಈ ಪರಿಸ್ಥಿತಿಯಲ್ಲಿ ಸರ್ಕಾರದ ವಿರುದ್ಧ ಅಪಪ್ರಚಾರ, ವದಂತಿಗೆ ಜನತೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

    ಕೇಂದ್ರ-ರಾಜ್ಯ ಸರ್ಕಾರಗಳು, ಜಿಲ್ಲಾಡಳಿತ, ಆರೋಗ್ಯ, ಪೆÇಲೀಸ್, ಜಿಪಂ ಸೇರಿದಂತೆ ವಿವಿಧ ಇಲಾಖೆಗಳು ಕೊರೋನಾ ಬಗ್ಗೆ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರೂ ಜನತೆ ಮಾತ್ರ ಇಂದಿಗೂ ಎಚ್ಚೆತ್ತಿಲ್ಲ. ಸರ್ಕಾರದ ನಿಯಮಾವಳಿ, ಮಾರ್ಗಸೂಚಿ ಎಲ್ಲರಿಗೂ ಒಂದೇ ಆಗಿರುತ್ತವೆ ಎಂಬುದನ್ನು ಯಾರೂ ಸಹ ಮರೆಯಬಾರದು. ಕೊರೊನಾ ಮಹಾಮಾರಿ ವಿರುದ್ಧ ಕೇಂದ್ರ-ರಾಜ್ಯ ಸರ್ಕಾರಗಳು ಸಮರ ಸಾರಿವೆ. ಜನರೂ ಸಹ ಇಂತಹ ಕಾರ್ಯಕ್ಕೆ ಕೈ ಜೋಡಿಸಿದಾಗ ಮಾತ್ರ ಕೊರೋನಾ ಮಹಾಮಾರಿಯೆಂಬ ವೈರಸನ್ನು ನಿಯಂತ್ರಿಸಲು, ವೈರಸ್ ವಿರುದ್ಧ ನಾವು ವಿಜಯ ಸಾಧಿಸಲು ಸಾಧ್ಯವಾಗುತ್ತದೆ ಎಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಅಥವಾ ಸೋಪಿನಿಂದ ಕೈ ಸ್ವಚ್ಛ ಮಾಡಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅವರು ಕೋರಿದ್ದಾರೆ.

    ಆತ್ಮಸ್ಥೈರ್ಯ, ಮುಂಜಾಗ್ರತೆಯೇ ಕೊರೋನಾ ವೈರಸ್‍ಗೆ ಸದ್ಯಕ್ಕೆ ಮಹಾಮದ್ದು. ಪ್ರತಿಯೊಬ್ಬರೂ ಆತ್ಮಸ್ಥೈರ್ಯದಿಂ
ದ ಇರುವ ಜೊತೆಗೆ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‍ನಿಂದ ಕೈ ಸ್ವಚ್ಛ ಮಾಡಿಕೊಳ್ಳಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link